ಕುಣಿಗಲ್:ಕಾರ್ಯಕರ್ತರ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ಗಾಯವಾಗಿರುವ ಘಟನೆ ಪಟ್ಟದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಹೂ ಮಾಲೆ ‌ಹಾಕಿ ಅಭಿನಂದಿಸಿದರು. ಇದೇ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದನ್ನೂ ಓದಿ:ಮಾವನ 3 ಷರತ್ತುಗಳನ್ನು ಕೇಳಿ ಮದುವೆ ದಿನವೇ ಹೆಂಡತಿಯನ್ನು ಬಿಟ್ಟು ಹೋದ ಗಂಡ!
ಈ ವೇಳೆ ಅಚಾನಕ್ ಆಗಿ ಸಚಿವ ರಾಜಣ್ಣ ತಮ್ಮ ಕನ್ನಡಕ ತೆಗೆದ ಸಂದರ್ಭದಲ್ಲಿ ಪಟಾಕಿ ಸಿಡಿದಿದೆ. ಬೆಂಕಿಯ ಕಿಡಿ ಬಲಗಣ್ಣಿಗೆ ತಾಗಿ ಗಾಯವಾಗಿದೆ. ಕೂಡಲೇ ಸಚಿವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಅವರು ಹಾಸನಕ್ಕೆ ತೆರಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
