ಬೆಂಗಳೂರು:ಕರ್ನಾಟಕದಿಂದ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತತಾಲ್ ಚಾರಣಕ್ಕೆ ತೆರಳಿದ್ದ ತಂಡವು ಹವಾಮಾನ ವೈಪರೀತ್ಯಕ್ಕೆ ಸಿಲುಕಿದೆ. ಈ ತಂಡದ ರಕ್ಷಣೆ, ಸ್ಥಳಾಂತರ ಕಾರ್ಯಾಚರಣೆ ಮೇಲ್ವಿಚಾರಣೆಗೆ ಡೆಹ್ರಾಡೂನ್ ಗೆ ತೆರಳಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಘಟನೆಯ ಪೂರ್ವಾಪರ ಮಾಹಿತಿ ಹಂಚಿಕೊಂಡಿದ್ದಾರೆ.
ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.
ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ  ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ.
ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.
ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ.
ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.
ಜೂನ್ 4 ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.
ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು.  ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಕೃಷ್ಣಬೈರೇಗೌಡ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 13 =
Remember me
