ಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು.
ಈ ಕುರಿತು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಈಶ್ವರಪ್ಪನವರು, ನಮ್ಮ ಇಲಾಖೆ ವಿಷಯಗಳನ್ನ ರಾಜ್ಯಪಾಲರ ಬಳಿ ಮಾತನಾಡಿಕೊಂಡು ಬಂದಿದ್ದೇನೆ ಅಷ್ಟೇ. ಅದರಲ್ಲೇನೂ ವಿಶೇಷತೆ ಇಲ್ಲ ಎಂದು ಹೇಳಿದ್ದಾರೆ.
ಇಲಾಖೆ ವಿಷಯಗಳನ್ನ ಚರ್ಚೆ ಮಾಡುವುದಕ್ಕೆ ಅವಕಾಶವಿತ್ತು. ಹಾಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿಕೊಂಡು ಬಂದಿದ್ದೇನೆ. ಇಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ. ಇಲಾಖೆ ಸಂಬಂಧ ವಿಷಯಗಳನ್ನ ಮಾತನಾಡಲು ರಾಜ್ಯಪಾಲರ ಬಳಿ ಅಷ್ಟೇ, ಅಲ್ಲ ದೆಹಲಿಗೂ ಹೋಗುತ್ತೇನೆ ಎಂದರು.
ದೆಹಲಿಯಲ್ಲಿ ನಮ್ಮ ಪಕ್ಷದ ನಾಯಕರ ಬಳಿ, ಕೇಂದ್ರ ಮಂತ್ರಿಗಳ ಜೊತೆ, ಇಲಾಖೆ ಅಧಿಕಾರಿಗಳ ಜೊತೆ, ಇಲಾಖಾ ಅಭಿವೃದ್ಧಿ ಕುರಿತಂತೆ ಅನೇಕ ಚರ್ಚೆಗಳನ್ನ ಮಾಡಬೇಕಾಗುತ್ತೆ. ಇದರಲ್ಲಿ ವಿಶೇಷವೇನೂ ಇಲ್ಲ. ಇಲಾಖೆ ಅನುದಾನ ವರ್ಗಾವಣೆ ಆಂತರಿಕ ವಿಷಯ. ಅದನ್ನ ಮಾಧ್ಯಮಗಳ ಎದುರು ಮಾತನಾಡಲು ಬರುವುದಿಲ್ಲ ಎಂದರು.
3 ಡಿವೈಎಸ್‌ಪಿ, 28 ಇನ್ಸ್​ಪೆಕ್ಟರ್​ಗಳ ವರ್ಗಾವಣೆ

ಯಡಿಯೂರಪ್ಪ ರಾಜಿನಾಮೆ ನೀಡಿ, ಇಲ್ಲ ಈಶ್ವರಪ್ಪನ್ನ ಸಂಪುಟದಿಂದ ತೆಗೆಯಿರಿ ಎಂದ ಡಿಕೆ ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
