ಬೆಳಗಾವಿ:ಎಂಎಸ್​ಪಿಸಿ (ಮಹಿಳಾ ಸಪ್ಲಿಮೆಂಟರಿ ಪ್ರೊಡಕ್ಷನ್ ಸೆಂಟರ್) ಕೇಂದ್ರಕ್ಕೆ ಇಂದು ಹಠಾತ್ ಭೇಟಿ ನೀಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಲ್ಲಿನ ಕಳಪೆ ಆಹಾರ ಮತ್ತು ಅವ್ಯವಸ್ಥೆ ಕಂಡು ಕಿಡಿಕಾರಿದ್ದಾರೆ.
ಅಂಗನವಾಡಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡುವ ಬೆಳಗಾವಿಯ ಹಲಗಾದಲ್ಲಿರುವ ಎಂಎಸ್​ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಠಾತ್ ಭೇಟಿ ನೀಡಿದರು. ಅಲ್ಲಿನ ಸ್ಥಿತಿಗತಿ ಕಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಇದನ್ನೂ ಓದಿ:ಈತನ ಬೈಕ್ ಬೆಲೆ 85 ಸಾವಿರ ರೂ.; ಕಟ್ಟಬೇಕಿದೆ 70,000 ರೂ. ದಂಡ!
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಎಸ್​ಪಿಸಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವ್ಯವಸ್ಥೆಯಿಂದ ಕೂಡಿತ್ತು. ಇಡೀ ಆವರಣದಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ಕಳಪೆ ಗುಣಮಟ್ಟದ ಆಹಾರ ಸಂಗ್ರಹಿಸಿರುವುದು ಕಂಡು ಬಂದಿದೆ. ಇದನ್ನು ಕಂಡು ಪೌಷ್ಠಿಕ ಆಹಾರ ಪೂರೈಸುವ ಸರ್ಕಾರದ ಮೂಲ ಉದ್ದೇಶವೇ ಇಲ್ಲಿ ಬುಡಮೇಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.
‘ನಾನು ಈ ಇಲಾಖೆಯ ಸಚಿವೆಯಾಗಿ ಈ ವ್ಯವಸ್ಥೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ರಾಜ್ಯದ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಠಿಕ ಆಹಾರ ಸಿಗಬೇಕು. ಯೋಜನೆಯ ಉದ್ದೇಶ ಸಫಲವಾಗಬೇಕು. ಯಾರದ್ದೋ ನಿರ್ಲಕ್ಷ್ಯದಿಂದ ಇಡೀ ಯೋಜನೆ ವಿಫಲವಾಗಬಾರದು. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಎಂಎಸ್​ಪಿಸಿ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲಿಸುತ್ತೇನೆ. ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಕ್ರಮ ಕೈಗೊಳ್ಳುತ್ತೇನೆ’ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 8 =
Remember me
