ಬೆಳಗಾವಿ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್ ಅವರು ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿರುವ ಫೋಟೋಗಳು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೃಣಾಲ್‌ ಹೆಬ್ಬಾಳ್ಕರ್ ಅವರ ಮನೆಗೆ ಆಗಮಿಸಿದ್ದರು. ಈ ವೇಳೆ ಆ ಪೆಂಡೆಂಟ್ ಅನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹುಲಿ ಪೆಂಡೆಂಟ್ ಧರಿಸಿರುವ ಫೋಟೋಗಳು ವೈರಲ್ ಆಗಿದ್ದವು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಪ್ರತಿಕ್ರಿಯೆ ನೀಡಿದ್ದರು. ಮದುವೆ ಸಮಯದಲ್ಲಿ ಯಾರೋ ಗಿಫ್ಟ್​ ಕೊಟ್ಟಿದ್ದರು ಅಂತ ಹಾಕಿಕೊಂಡಿದ್ದನು. ಮೃಣಾಲ್ ಹಾಕಿದ ಪೆಂಡೆಂಟ್ ಪ್ಲಾಸ್ಟಿಕ್ ನದ್ದು, ಅದು ಒರಿಜಿನಲ್ ಅಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದರು.
ಅಷ್ಟೇ ಅಲ್ಲ, ನಾನು ಸಸ್ಯಾಹಾರಿ. ಹುಲಿ, ಜಿಂಕೆ, ಕೋಳಿ ಇನ್ಯಾವುದೇ ಬಲಿಯನ್ನು ಇಷ್ಟಪಡಲ್ಲ. ಅಧಿಕಾರಿಗಳು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡ್ತಿನಿ ಎಂದು ತಿಳಿಸಿದರು.
ಮೂರು ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಂಚಿಕೊಂಡಿದ್ದ ತಮ್ಮ ಮದುವೆಯ ಫೋಟೋ ಆಲ್ಬಂಗಳಲ್ಲಿ ಅವರ ಪುತ್ರ ಮೃಣಾಲ್ ಹುಲಿ ಪೆಂಡೆಂಟ್ ಧರಿಸಿರುವ ಚೈನ್ ಹಾಕಿರುವುದು ಕಂಡುಬಂದಿತ್ತು.
ನಿವಾಸದಲ್ಲಿ ಪರಿಶೀಲನೆಇಂದು ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸಕ್ಕೆ ತೆರಳಿದ್ದ ಅರಣ್ಯಾಧಿಕಾರಿಗಳು ಹುಲಿ ಗುರು ಹೋಲುವ ಪೆಂಡೆಂಟ್ ಪರಿಶೀಲನೆ ನಡೆಸಿದರು.
‘ಮಗ ಧರಿಸಿದ್ದ ಪೆಂಡೆಂಟ್ ಪ್ಲಾಸ್ಟಿಕ್​​​​​​​​, ಒರಿಜಿನಲ್ ಅಲ್ಲ’: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − two =
Remember me
