ಬೆಂಗಳೂರು:ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯು ಗೊಂದಲದ ಗೂಡಾದಂತಿದೆ. ಮಕ್ಕಳು ತೆರಿಗೆ ಪಾವತಿ ಮಾಡಿದರೂ ಆ ಕುಟುಂಬಕ್ಕೆ ಅಥವಾ ತಾಯಿಗೆ 2000 ರೂಪಾಯಿ ಸಿಗುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ಈ ಹೇಳಿಕೆಯಿಂದ  ಜನರು ಸಾಕಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ:ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ದಿನಕ್ಕೊಂದು, ಒಂದರ ಮೇಲೊಂದು ಗ್ಯಾರಂಟಿ ವಿಧಿಸುತ್ತಿರುವ ಸರ್ಕಾರವು ಮಾರ್ಗಸೂಚಿಯಲ್ಲಿ ಇಲ್ಲದ ಹೊಸದೊಂದು ಕಂಡಿಷನ್ ಸೇರ್ಪಡೆ ಮುಂದಾಗಿದೆಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಪತಿ, ಪತ್ನಿ ಇಬ್ಬರಲ್ಲಿ ಯಾರಾದರೂ ಒಬ್ಬರು ತೆರಿಗೆ ಪಾವತಿ ಮಾಡುತ್ತಿದ್ದರೆ ಈ ಯೋಜನೆ ಅನ್ವಯ ಇಲ್ಲ ಅಂತ ಸರ್ಕಾರವು ಆದೇಶ ಹೊರಡಿಸಿತ್ತು.
ಆದರೆ ಸಚಿವೆಯ ಈ ಹೇಳಿಕೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಒಟ್ಟಿನಲ್ಲಿ, ತೆರಿಗೆ ಪಾವತಿದಾರರಿಗೆ ಈ ಯೋಜನೆಯು ಸಿಗುವುದಿಲ್ಲ ಎಂದು ಜನಸಾಮಾನ್ಯರು ಆರೋಪ ಮಾಡುತ್ತಿದ್ದು, ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳ ಮಧ್ಯೆ ಗೃಹಲಕ್ಷ್ಮೀ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − seven =
Remember me
