ಚಾಮರಾಜನಗರ:ಬೈಕ್ ಹಾಗೂ‌ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಚಾಲಾನ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ ಬೈಕ್​​ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ಗೆ ಡಿಕ್ಕಿ ಹೊಡೆದ ಪರಿಣಾಮ ರಕ್ತ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು.
ಇದನ್ನೂ ಓದಿ:ಎಲ್ಲ ರಂಗದಲ್ಲಿ ವೈಫಲ್ಯವೇ ಕಾಂಗ್ರೆಸ್​ ಸರ್ಕಾರದ ಸಾಧನೆ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ
ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು.
ಈ ವೇಳೆ ಸ್ಥಳೀಯರು ದೊಡ್ಡಪೇಟೆ ಕ್ರಾಸ್​ನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಮಾನವೀಯತೆ ಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
