ಬೆಂಗಳೂರು:ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಕೃತ್ಯವನ್ನು ಅತ್ಯಂತ ಬರ್ಬರ ಘಟನೆ ಎಂದು ಖಂಡಿಸಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಈ ದುಷ್ಕೃತ್ಯ ಎಸಗಿದವನನ್ನು ಗಲ್ಲಿಗೇರಿಸಬೇಕು ಎಂದು ಶನಿವಾರ ಆಗ್ರಹಿಸಿದರು.
ಇದನ್ನೂ ಓದಿ:ಅರಾಜಕತೆ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿಗೆ ವರದಿ ಸಲ್ಲಿಸಲಿ
ಘಟನೆಯ ಬಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಹ್ಯೇಯ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಇಂತಹ ದುಷ್ಕೃತ್ಯ ಎಸಗಿದವರಿಗೆ ತಕ್ಷಣವೇ ಕಠಿಣ ಶಿಕ್ಷೆ ಆಗಬೇಕು. ವಿಚಾರಣೆಯಲ್ಲಿ ವಿಳಂಬಕ್ಕೆ ಆಸ್ಪದವಾಗಬಾರದು ಹೀಗಾಗಿ, ತ್ವರಿತ ನ್ಯಾಯಾಲಯ ಸ್ಥಾಪನೆ ಆಗಬೇಕು” ಎಂದರು.

“ಇಂತಹ ಘೋರ ದುಷ್ಕೃತ್ಯ ಎಸಗಿದವರಿಗೆ ಗಲ್ಲು ಶಿಕ್ಷೆಯಂತಹ ಕಠಿಣಾತಿ ಕಠಿಣ ಶಿಕ್ಷೆಯೇ ಆಗಬೇಕು. ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ. ಇಂತಹ ಘಟನೆಯನ್ನು ಯಾರೇ ಮಾಡಿದರೂ ಖಂಡನಾರ್ಹ. ಇದೊಂದು ಬರ್ಬರ ಕೃತ್ಯವಾಗಿದ್ದು ಯಾವ ದೃಷ್ಟಿಯಿಂದಲೂ ಇದನ್ನು ಒಪ್ಪಲು ಸಾಧ್ಯವೇ ಇಲ್ಲ” ಎಂದರು.
ಇದನ್ನೂ ಓದಿ:ಒಂದು ಷೇರು ಆಗಲಿದೆ 5 ಷೇರು: ಸರ್ಕಾರಿ ಬ್ಯಾಂಕ್​ ಸ್ಟಾಕ್​ ವಿಭಜನೆ ಮಾಡುತ್ತಿರುವುದೇಕೆ?
ಈ ಘಟನೆಯ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಗಮನಕೊಡಲಿದೆ ಎಂದ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ಘೋರಕೃತ್ಯ ಎಸಗಿದವರನ್ನು ವಿಳಂಬವಿಲ್ಲದೆ ಗಲ್ಲು ಶಿಕ್ಷೆಗೆ ಒಳಪಡಿಸಲು ಸಾಧ್ಯವಾಗುವಂತಹ ಕಾನೂನು ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಬೇಕು ಎಂದು ಅಭಿಪ್ರಾಯಪಟ್ಟರು. ಚಿಕ್ಕವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲೂ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಅವರು ಹೇಳಿದರು.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + six =
Remember me
