ಬೆಂಗಳೂರು:ರಾಜ್ಯದ ಜನತೆ ಅಭೂತಪೂರ್ವ ಬಹುಮತ ನೀಡಿ ಆರ್ಶಿವಾದ ಮಾಡುವ ಮೂಲಕ ಅತಂತ್ರ ಪರಿಸ್ಥಿತಿ ಬರಬಹುದು ಎಂಬ ವಿಚಾರವನ್ನು ಸುಳ್ಳಾಗಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ರಾಜ್ಯವನ್ನು ಸುಸ್ಥಿರವಾಗಿ ಅಭೀವೃದ್ಧಿ ಮಾಡಲು ನಮ್ಮ ಪಕ್ಷ ಕೆಲಸ ಮಾಡಲಿದೆ. ಕಳೆದ 4 ವರ್ಷಗಳಲ್ಲಿ ರಾಜ್ಯದ ಆಡಳಿತ ಹದಗೆಟ್ಟಿದೆ. ಮುಂದಿನ 5 ವರ್ಷದಲ್ಲಿ ರಾಜ್ಯದ ಅಭಿವೃದ್ಧಿ ಸಲುವಾಗಿ ಹಲವು ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ‌ ಮಾಡಲಾಗುತ್ತದೆ. ಈ ಹಿಂದೆ ನಮ್ಮ ನಾಯಕರು ಮಾಡಿರುವ ಒಳ್ಳೆಯ ಕೆಲಸಗಳನ್ನು ಮತ್ತೆ ತರುವ ಮೂಲಕ ರಾಜ್ಯದ ಗತವೈಭವ ಮರುಳಿಸಬೇಕಿದೆ ಎಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಎಂ.ಬಿ.ಪಾಟೀಲ್ ಹೇಳಿದರು.
ಇದನ್ನೂ ಓದಿ:ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ… ನನಗೆ ಯಾವುದೇ ಅಸಮಾಧಾನ ಇಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 24 ಜನ ಶಾಸಕರು ಮಾತ್ರ ಸಚಿವರಾಗಲು ಸಾಧ್ಯ. ಸದ್ಯ 10 ಜನ ಪ್ರಮಾಣ ವಚನ ಸ್ವೀಕರಿಸಲಿದ್ದೇವೆ. ಈಗಾಗಲೇ ಗೃಹ ಸಚಿವನಾಗಿ, ಜಲಸಂಪನ್ಮೂಲ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಈಗ ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಮೂಲಕ ಜನರಿಗೆ ಒಳ್ಳೆಯದಾಗುವಂತೆ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಸ್ಲಿಂ, ಎಸ್​ಟಿ ಜನಾಂಗ, ಲಿಂಗಾಯತರು ಸೇರಿದಂತೆ ಪ್ರತಿಯೊಬ್ಬರೂ ನಮಗೆ ಆಶಿರ್ವಾದ ಮಾಡಿದ್ದಾರೆ. ಕ್ಯಾಬಿನೆಟ್ ಸಭೆ ಆಗುತ್ತಿದ್ದಂತೆ ನಮ್ಮ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ತೀರ್ಮಾನ ಆಗುತ್ತದೆ. ಅದರ ಬಗ್ಗೆ ನಾನು ಈಗ ಮಾತನಾಡಲು ಸಾಧ್ಯವಿಲ್ಲ. 5 ವರ್ಷ ರಾಜ್ಯದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ‌ ಮಾಡಲಾಗುತ್ತದೆ. ರಾಜ್ಯದ ಹಣಕಾಸು ವ್ಯವಸ್ಥೆ ತೀರಾ ಹದಗೆಟ್ಟಿದೆ ಎಂದು ಹೇಳಿದರು.
ಇದನ್ನೂ ಓದಿ:ಇನ್ನೂ ತೀರ್ಮಾನವಾಗದ ಸಚಿವ ಸಂಪುಟ: ಬೇಸರಗೊಂಡು ಸಿದ್ದು ಬಳಿ ಸುಳಿಯದ ಆಪ್ತರು!
ಪಕ್ಷದ ಹೈಕಮಾಂಡ್ ಎಲ್ಲವನ್ನೂ ನಿರ್ಧಾರ ಮಾಡುವುದರಿಂದ ಯಾವುದೇ ಗೊಂದಲ ಇಲ್ಲ. ಹಿರಿತನ ನೋಡಿ ಸ್ಥಾನಮಾನ ಕೊಡಲಾಗುತ್ತದೆ. ನಮ್ಮ‌ಇಚ್ಛೆಯ ಖಾತೆಯನ್ನು ತಿಳಿಸುತ್ತೇವೆ, ಕೊಡುವುದು ಸಿಎಂ ಅವರ ಪರಮಾಧಿಕಾರ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
