ಚಿಕ್ಕಬಳ್ಳಾಪುರ:ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಪ್ರಕರಣದಡಿ ಇದೀಗ ಏಳು ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಕರ್ತವ್ಯದಿಂದ ಸಸ್ಪೆಂಡ್ ಮಾಡಲಾಗಿದ್ದು, ಇಷ್ಟಕ್ಕೆಲ್ಲಾ ಕಾರಣ ಯಾರು? ಜೈಲಿನೊಳಗೆ ಇಂತಹ ವ್ಯವಸ್ಥೆ ಮಾಡಿಕೊಟ್ಟಿದ್ಯಾರು ಎಂಬ ಹಲವು ಪ್ರಶ್ನೆಗಳು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಪ್ರಕರಣದ ತನಿಖೆಯನ್ನು ಹಿರಿಯ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದರು.
ಇದನ್ನೂ ಓದಿ:ಮೊಬೈಲ್​ಗಳಿಂದ ಛಾಯಾಗ್ರಾಹಕರ ಬದುಕಿಗೆ ಧಕ್ಕೆ
ಈ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಪ್ರಕರಣದಲ್ಲಿ ತಪ್ಪು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಕೆಲವು ಬೇಜವಾಬ್ದಾರಿ ಅಧಿಕಾರಿಗಳಿಂದ ಸರ್ಕಾರಕ್ಕೆ ಆಗಾಗ ಕೆಟ್ಟ ಹೆಸರು ಬರುತ್ತದೆ. ಇಂತಹವರಿಗೆ ಸರ್ಕಾರವು ತಕ್ಕ ಪಾಠ ಕಲಿಸಬೇಕಾಗಿದೆ. ದರ್ಶನ್ ರಾಜಾತಿಥ್ಯದ ಬಗ್ಗೆ ತನಿಖೆಯಿಂದ ಮೊದಲು ತಪ್ಪು ಯಾರದ್ದು ಎನ್ನುವುದು ತಿಳಿಯಬೇಕು ಎಂದರು.
ಇನ್ನು ಶೋಷಿತರ ಒಕ್ಕೂಟದಿಂದ ರಾಜಭವನ ಚಲೋ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜನಪರ ನಾಯಕನಿಗೆ ಸಮುದಾಯಗಳು ಬೆಂಬಲ ನೀಡುವುದು ಸಹಜ. ಸಿಎಂ ಸಿದ್ದರಾಮಯ್ಯ ವಿಚಾರವಾಗಿ ರಾಜ್ಯಪಾಲರು ತೋರುತ್ತಿರುವ ಧೋರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಇವರೇ ನೋಡಿ ಆಲ್ಕೋಹಾಲ್​ ಮುಟ್ಟದ ಟೀಮ್ ಇಂಡಿಯಾದ ಮೂವರು ಸ್ಟಾರ್​ ಕ್ರಿಕೆಟಿಗರು!

ಮನೆಗೆ ಹೋದ್ರೂ ಬಾಸ್​ ಕಾಟ ತಪ್ತಿಲ್ವಾ? ಇಲ್ಲಿನ ಉದ್ಯೋಗಿಗಳಿಗೆ ಸೂಪರ್​​ ಪವರ್​ ಕೊಟ್ಟಿದೆ ಈ ದೇಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 13 =
Remember me
