ಬೆಳಗಾವಿ:ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ ಮನೆಗೆ ಸಚಿವ ಮುರುಗೇಶ ನಿರಾಣಿ ‌ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ‌ಹೇಳಿದರು.
ಇದೇ ವೇಳೆ, ಪತ್ನಿ ಜಯಶ್ರೀ ಹಾಗೂ ತಾಯಿ ಪಾರ್ವತಿಗೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ‌ಪರಿಹಾರ ನೀಡಿದರು. ಈ ವೇಳೆ ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಕುಟುಂಬಸ್ಥರು ಕೋರಿದರು.
ಈ ಕುರಿತು ಮನವಿ ಮಾಡಿದ್ದೇವೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂತೋಷ ಪಾಟೀಲ್​​ಗೆ ಬರಬೇಕಿದ್ದ ಕಾಮಗಾರಿಯ ಬಿಲ್ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಕ್ರಮವಹಿಸುವುದಾಗಿ ನಿರಾಣಿ‌ ಭರವಸೆ ನೀಡಿದರು.
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗೋಷ್ಟಿ ನಡೆಸಿದ ಈಶ್ವರಪ್ಪ ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಇನ್ನೊಂದೆಡೆ, ಆರೋಪಿಗಳ ಬಂಧನವಾಗಬೇಕು ಎಂದು ಸಂತೋಷ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆಹೋರಾತ್ರಿ ಧರಣಿ ಮುಂದುವರಿಸಿದೆ.
ಕೊನೆಗೂ ರಾಜೀನಾಮೆ ಘೋಷಿಸಿದ ಈಶ್ವರಪ್ಪ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 17 =
Remember me
