ಬೆಂಗಳೂರು :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು, ‘ಸೆಲ್ಫಿ ಪಾಯಿಂಟ್’​​ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಟೋಕಿಯೋ ಓಲಂಪಿಕ್ಸ್​ನಲ್ಲಿ ಪಾಲ್ಗೊಳ್ಳುತ್ತಿರುವ ನಮ್ಮ ದೇಶದ ಕ್ರೀಡಾಪಟುಗಳನ್ನು ಬೆಂಬಲಿಸಿ, ಶುಭ ಹಾರೈಸಿದ್ದಾರೆ.
ವಿಧಾನಸೌಧದ ಪೂರ್ವಭಾಗದಲ್ಲಿರುವ ಮೆಟ್ಟಿಲುಗಳ ಮೇಲೆ ಅಳವಡಿಸಿರುವ ಸೆಲ್ಫಿ ಪಾಯಿಂಟ್​​ನಲ್ಲಿ ನಿಂತು ಸಚಿವರು ಫೋಟೋ ತೆಗೆಸಿಕೊಂಡರು. ಸಚಿವರ ಜೊತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಆಯುಕ್ತ ಡಾ.ಗೋಪಾಲಕೃಷ್ಣ ಕೂಡ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಫೋಟೋ ಕ್ಲಿಕ್ಕಿಸಿಕೊಂಡರು.
ಇದನ್ನೂ ಓದಿ:ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಮಹತ್ವದ ಸಭೆ: ಬೊಮ್ಮಾಯಿ
ಒಲಂಪಿಕ್ಸ್ 2020 ಕ್ರೀಡಾಕೂಟವು ಜಪಾನಿನ ರಾಜಧಾನಿ ಟೋಕಿಯೋ ನಗರದಲ್ಲಿ, 2021 ರ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದಿಂದ ಹಲವಾರು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ದೇಶದ ಹೆಮ್ಮೆಯ ಪ್ರತೀಕವಾಗಿರುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಮತ್ತು ಭಾರತದ 130 ಕೋಟಿ ನಾಗರೀಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಸೆಲ್ಫಿ ಪಾಯಿಂಟ್​​(Selfie Point)ಗಳನ್ನು ಅಳವಡಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಸೆಲ್ಫಿ ಪಾಯಿಂಟ್​​ನಲ್ಲಿ ನಿಂತು ಫೋಟೋಗೆ ಪೋಸ್​ ನೀಡಿದರು.
ಟೋಕಿಯೋ ಒಲಂಪಿಕ್ಸ್​ ಸಮಾರಂಭಗಳಿಗೆ ಫ್ಲ್ಯಾಗ್​ಬೇರರ್ಸ್ ಆಯ್ಕೆ

ಸಿಎಂ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

ಮಾಜಿ ರಣಜಿ ಕ್ರಿಕೆಟಿಗ, ಈಗ ರಸ್ತೆಬದಿ ದಾಲ್​ ಪೂರಿ ಮಾರುತ್ತಿದ್ದಾನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
