ಮಂಡ್ಯ:ರಾಜ್ಯ ಸರ್ಕಾರದಲ್ಲಿ ನಾನು ಏನಾಗಿದ್ದೇನೆ ಎಂಬ ಪರಿಜ್ಞಾನವೇ ಇಲ್ಲದೆ ತಮ್ಮದೇ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಿಗೆ ಕಾಮನ್‌ಸೆನ್ಸ್ ಇಲ್ಲ ಎಂದು ಶಾಸಕ ಸುರೇಶ್‌ಗೌಡ ಟೀಕಿಸಿದರು. ನಾಗಮಂಗಲ ತಾಲೂಕಿನ ಪಿ.ನೇರಲಕೆರೆ ಗ್ರಾಮದಲ್ಲಿ ನಡೆಯುತ್ತಿರುವ ಪಿಎಂಜಿಎಸ್‌ವೈ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನ ಬೆಳ್ಳೂರು ಹೋಬಳಿ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಮಾಡಲಾಗಿರುವ ಭೂಸ್ವಾಧೀನ ಪ್ರಕ್ರಿಯೆ ವಿಚಾರವಾಗಿ ನ.18 ರಂದು ಬೆಂಗಳೂರಿನಲ್ಲಿ ಸಚಿವ ನಾರಾಯಣಗೌಡ ನೀಡಲಾಗಿದ್ದ ಹೇಳಿಕೆಗೆ ತಿರುಗೇಟು ನೀಡಿದರು. ತಮ್ಮದೇ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಯೋಜನೆಯ ಬಗ್ಗೆ ಟೀಕಿಸುತ್ತಿರುವ ನಾರಾಯಣಗೌಡ, ಅದೇ ಸರ್ಕಾರದಲ್ಲಿ ಯಾವ ಸ್ಥಾನದಲ್ಲಿದ್ದೇನೆ ಎಂಬುದನ್ನು ಅರಿತು ಟೀಕಿಸುವಷ್ಟು ಪರಿಜ್ಞಾನವು ಇಲ್ಲದಂತೆ ಮಾಧ್ಯಮಗಳ ಮುಂದೆ ಹಾಗೂ ರೈತರ ಮುಂದೆ ಹೇಳಿಕೆ ನೀಡಿದ್ದಾರೆ. ಕೈಗಾರಿಕೆ ಸ್ಥಾಪನೆ ಯೋಜನೆಯನ್ನು ಕೈಬಿಡಲು ಸಿಎಂ ಜತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಆಗಾದರೇ ಅವರದೇ ಸರ್ಕಾರದ ಕೈಗಾರಿಕೆ ಸಚಿವರ ಗಮನಕ್ಕೆ ಬಾರದೆ ಭೂಸ್ವಾಧೀನವಾಗಿದೆಯೇ ಅಥವಾ ನಾರಾಯಣಗೌಡರು ಕೈಗಾರಿಕೆ ಸಚಿವರಾದರೇ ಎಂದು ಟೀಕಿಸಿದರು.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 − three =
Remember me
