ಬೆಂಗಳೂರು:ಅನ್​ಲಾಕ್​-5ನೇ ಹಂತದಲ್ಲಿ ಶಾಲೆ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದರೂ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಆಯಾ ರಾಜ್ಯಸರ್ಕಾರಗಳಿಗೆ ಕೊಟ್ಟಿದೆ. ಕರ್ನಾಟಕದಲ್ಲಂತೂ ಶಾಲಾರಂಭದ ಬಗ್ಗೆ ಭರ್ಜರಿ ಚರ್ಚೆಯೇ ನಡೆಯುತ್ತಿದೆ. ಪರ-ವಿರೋಧಗಳೂ ಹೆಚ್ಚುತ್ತಿವೆ.
ಇನ್ನು ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಉಳಿದ ಶಾಸಕರು, ಸಂಸದರು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಕೇಳುತ್ತಿದ್ದಾರೆ. ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ಈ ಹಂತದಲ್ಲಿ ಶಾಲೆ ಆರಂಭ ಮಾಡುವುದು ಮಕ್ಕಳನ್ನು ಯಮನ ಬಾಯಿಗೆ ತಳ್ಳಿದಂತೆ ಎಂದು ಹೇಳಿದ್ದರು.
ಇದೀಗ ಶಿಕ್ಷಣ ಸಚಿವರು ಮತ್ತೆ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದು, ಶಾಲೆ ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ, ಶಿಕ್ಷಣ ಇಲಾಖೆಗಾಗಲೀ ಇಲ್ಲ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಅದನ್ನು ಬಲಿಕೊಟ್ಟು ಪ್ರತಿಷ್ಠೆಗಾಗಿ ಏನನ್ನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ:ಮಕ್ಕಳನ್ನು ಶಾಲೆಗೆ ಸೇರಿಸಲು ಇನ್ನೂ ಒಂದು ವಾರ ಕಾಲಾವಕಾಶ ನೀಡಿದ ಸರ್ಕಾರ
ಶಾಲೆ ಆರಂಭದ ಬಗ್ಗೆ ರಾಜ್ಯದ ಎಲ್ಲ ಶಾಸಕರುಗಳ ಅಭಿಪ್ರಾಯವನ್ನೂ ಸುಮಾರು 9 ದಿನಗಳ ಹಿಂದೆ ನಾನು ಕೇಳಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಅವರೂ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.ಅಭಿಪ್ರಾಯ ಕೇಳಿದ ಮಾತ್ರಕ್ಕೆ ಶಾಲೆ ಆರಂಭ ಮಾಡುವ ನಿರ್ಧಾರವನ್ನು ಕೈಗೊಂಡಿದ್ದೇವೆ ಎಂಬ ಅರ್ಥದಲ್ಲಿ ಬಹಳ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ. ಮತ್ತೆಮತ್ತೆ ಇದು ನಡೆಯುತ್ತಲೇ ಇದೆ, ನಾನೂ ಪದೇಪದೆ ಸ್ಪಷ್ಟೀಕರಣ ನೀಡುತ್ತಲೇ ಇದ್ದೇನೆ.
ಇದೀಗ ಮತ್ತೊಮ್ಮೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಶಾಲೆ ಆರಂಭ ಮಾಡುವ ತರಾತುರಿ ನಮಗಿಲ್ಲ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ ಹೊರತು ಯಾವುದನ್ನೂ ಧಿಡೀರನೆ ಘೋಷಿಸುವುದಿಲ್ಲ. ಯಾವುದೇ ಪಾಲಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ತಿಳಿಸುತ್ತಿದ್ದೇನೆ. ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ, ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಎಂಬ ಅರಿವು ನನಗೆ ಇದೆ ಎಂದು ಬರೆದಿದ್ದಾರೆ.
ಮಕ್ಕಳನ್ನು ಯಮನ ಬಾಯಿಗೆ ತಳ್ಳಬೇಡಿ: ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
