ಬೆಂಗಳೂರು :ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕರೊನಾ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಇಂದು ಘೋಷಿಸಿದ್ದಾರೆ.
ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ 18 ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರ ಕುಟುಂಬದ ಸದಸ್ಯರನ್ನು ನಾಳೆ ಅವರ ಮನೆಗಳಿಗೆ ತೆರಳಿ ಭೇಟಿಯಾಗಲಿರುವ ಪಾಟೀಲ್, ಪರಿಹಾರ ಧನ ವಿತರಿಸಲಿದ್ದಾರೆ.
ಕೆಲವು ದಿನಗಳ ಹಿಂದೆ, ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರಿನ ಅಥವಾ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದಲ್ಲಿ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಸಹ ಬಿ.ಸಿ.ಪಾಟೀಲ್ ಘೋಷಿಸಿದ್ದರು.
ಕರೊನದಿಂದಾಗಿ ಪಾಲಕರಿಂದ ದೂರಾದ ಮಕ್ಕಳ ಆರೈಕೆಗೆ ಕೇಂದ್ರಗಳು

“ಬ್ಲಾಕ್​ ಫಂಗಸ್​ ಸೋಂಕು ತಡೆಯಬೇಕೆಂದರೆ ಸ್ಟೆರಾಯ್ಡ್​ಗಳ ದುರ್ಬಳಕೆ ನಿಲ್ಲಿಸಿ”

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:seventeen − 6 =
Remember me
