ಬೆಂಗಳೂರು:ಈಗಾಗಲೇ ಹಲವು ಶಾಸಕರು, ಸಚಿವರಿಗೆ ಕರೊನಾ ಸೋಂಕು ತಗುಲಿದ್ದು, ಇದೀಗ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿಯವರೂ ಸೋಂಕಿಗೆ ಒಳಗಾಗಿದ್ದಾರೆ.ಸಾಮಾಜಿಕ ಜಾಲತಾಣಗಳ ಮೂಲಕ ತಮಗೆ ಕೊವಿಡ್​-19 ತಗುಲಿದ್ದನ್ನು ದೃಢಪಡಿಸಿರುವ ಪ್ರಲ್ಹಾದ್ ಜೋಶಿ, ನನಗೆ ಯಾವುದೇ ರೋಗ ಲಕ್ಷಣಗಳೂ ಇಲ್ಲ. ವೈದ್ಯರ ಸಲಹೆಯ ಮೇರೆಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಸಚಿವರು ನಿನ್ನೆಯಷ್ಟೇ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ್​ ಸವದಿ ಸೇರಿ ಇನ್ನೂ ಕೆಲವು ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರೂ ತಪಾಸಣೆಗೆ ಒಳಗಾಗುವ ಅಗತ್ಯ ಇದೆ.
ಮೊನ್ನೆ ತಾನೇ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ತಮಗೆ ಕರೊನಾ ಸೋಂಕು ತಗುಲಿದ್ದಾಗಿ ತಿಳಿಸಿದ್ದರು. ಅವರೂ ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಸರ್ಕಾರಿ ಬಸ್​​ಗಳಲ್ಲಿ ಅಪಘಾತ ಮುನ್ಸೂಚನೆ ನೀಡುವ ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
