ಬೆಂಗಳೂರು:ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಘಟಕದ ಪ್ರಮುಖ ನಾಯಕರು ರಸ್ತೆಯ ಪಕ್ಕದ ಬ್ಯಾರಿಕೇಡ್​ಗಳ ಹಿಂದೆ ಜನ ಸಾಮಾನ್ಯರಂತೆ ನಿಂತು ಮೋದಿಯತ್ತ ಕೈಬೀಸುತ್ತಿರುವುದನ್ನು ಸಚಿವ ಪ್ರಿಯಾಂಕ್​​ ಖರ್ಗೆ ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಖರ್ಗೆ ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ ಎಂದು ಪ್ರಶ್ನಿಸಿದ್ದಾರೆ.
ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ@BJP4Karnatakaನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ!ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ.ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ…pic.twitter.com/2fEXz2PvEo
ಇದನ್ನೂ ಓದಿ:ಪಂಜಾಬ್​ನಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೇ; ಸಿಎಂ ಭಗವಂತ್​ ಮಾನ್​ಗೆ ರಾಜ್ಯಪಾಲರ ಬಹಿರಂಗ ಎಚ್ಚರಿಕೆ
ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ. ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ಟೀಕಿಸಿದ್ದಾರೆ.
ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ. ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
