ಬೆಂಗಳೂರು:ನ್ಯೂಜಿಲೆಂಡ್‌ನ ಕ್ರೈಸ್ಟ್ ಚರ್ಚ್ ನಗರದಲ್ಲಿ ಸಿಲುಕಿರುವ 12 ಜನ ಇಂಜಿನಿಯರ್‌ಗಳನ್ನು ರಕ್ಷಿಸುವಂತೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಬಿಎಸ್​ವೈಗೆ ಡಿಕೆಶಿ ಸವಾಲು.. ಅದೂ 24 ಗಂಟೆ ಗಡುವು ವಿಧಿಸಿ!
ಈ ಕುರಿತು ವಿದೇಶಾಂಗ ಸಚಿವ ಡಾ. ಸುಬ್ರಮಣ್ಯಂ ಜೈಶಂಕರ್ ಅವರಿಗೆ ಪತ್ರವೊಂದನ್ನು ಬರೆದಿರುವ ಅವರು, ಆದಷ್ಟು ಬೇಗ ಆ ಇಂಜಿನಿಯರ್‌ಗಳನ್ನು ಅಲ್ಲಿಂದ ಭಾರತಕ್ಕೆ ಕರೆತರುವಂತೆ ಕೋರಿದ್ದಾರೆ.
ಈ ಇಂಜಿನಿಯರ್‌ಗಳು ಹೈಡ್ರಾಲಜಿ ವಿಷಯದ ತರಬೇತಿಗಾಗಿ ಅಲ್ಲಿಗೆ ಹೋಗಿದ್ದರು, ಮಾ. 23ರಂದು ಹಿಂತಿರುಗಬೇಕಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಬರಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೆಲವೊಮ್ಮೆ ಚಿಕ್ಕ ಸಂಗತಿಗಳೂ ಅಮೂಲ್ಯವೆನಿಸುತ್ತವೆ. ಅದಕ್ಕೊಂದು ಸಾಕ್ಷಿ ಈ ವಿಡಿಯೋದಲ್ಲಿದೆ.
ಜೂ. 7ರಂದು ಆಕ್ಲೆಂಡ್‌ನಿಂದ ಬರಲಿರುವ ವಿಮಾನದಲ್ಲಿ ಈ ಇಂಜಿನಿಯರ್‌ಗಳನ್ನು ಕರೆತರಲು ಅವಕಾಶ ಕಲ್ಪಿಸುವಂತೆಯೂ ಮನವಿ ಮಾಡಿದ್ದಾರೆ. ವಾಪಸು ಬರುವವರನ್ನು ಕೂಡಲೇ ಕ್ವಾರಂಟೈನ್‌ಗೆ ಒಳಪಡಿಸುವ ಜವಾಬ್ದಾರಿ ತಮ್ಮದು ಎಂದೂ ಹೇಳಿದ್ದಾರೆ.
ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್, ಮಾಲ್ ‌ಓಪನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
