ಬೆಂಗಳೂರು:ನೆವೆಂಬರ್​​ 1, ಕನ್ನಡ ರಾಜ್ಯೋತ್ಸವ ದಿನದಂದು ಡಾ.ಪುನೀತ್​​ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆ ಸಚಿವರಾದ ಆರ್​​. ಅಶೋಕ್​ ಮತ್ತು ಸುನೀಲ್ ಕುಮಾರ್ ಪುನೀತ್​​ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ಅಧಿಕೃತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ರಾಜ್ಯ ಸರ್ಕಾರ ಪುನೀತ್​ ರಾಜ್​ಕುಮಾರ್​ಗೆ ಮರಣೋತ್ತರವಾಗಿ ರಾಜ್ಯದ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪುನೀತ್​​ ರಾಜ್​ಕುಮಾರ್ ಅವರ ಕುಟುಂಬ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಕುಟುಂಬದಿಂದ 50 ಜನ ಭಾಗಿಯಾಗುತ್ತಿದ್ದು, ಅವರಿಗೆ ವಿಶೇಷ ಪಾಸ್​ಗಳನ್ನು ನೀಡಲಾಗಿದೆ.
ಈ ವೇಳೆ ಅಶ್ವಿನಿ ಪುನೀತ್​​ ಅವರ ಜತೆಗೆ ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಪತ್ನಿ ಹಾಜರಿದ್ದರು. ಅವರೊಂದಿಗೆ ಕಾರ್ಯಕ್ರಮದ ಬಿಗಿ ಬಂದೋಬಸ್ತ್​​ ಕುರಿತು ಸಚಿವರು ಕೆಲಕಾಲ ಚರ್ಚೆ ನಡೆಸಿದರು.
‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮಕ್ಕೆ ತೆಲುಗು ನಟ ಜೂ.ಎನ್​​ಟಿಆರ್​​ಗೆ ಸರ್ಕಾರದ ವತಿಯಿಂದ ವಿಶೇಷ ಆಹ್ವಾನ ನೀಡಲಾಗಿತ್ತು. ಪುನೀತ್​ ರಾಜ್​ಕುಮಾರ್ ಕುಟುಂಬ ಸದಸ್ಯರು ಕೂಡ ಜೂ.ಎನ್​​ಟಿರ್​ ಭೇಟಿಯಾಗಿ ಆಹ್ವಾನಿಸಿದ್ದರು. ಇದೀಗ ಅವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದಕ್ಕಾಗಿ ಬೆಂಗಳೂರಿಗೆ ಮುಂಚಿತವಾಗಿ ಆಗಮಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 6 =
Remember me
