ಬಳ್ಳಾರಿ:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ನನ್ನ ಬಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೇಳಿದರೆ ಖುಷಿಯಿಂದಲೇ ಕೊಡುವೆ ಎಂದು ಅರಣ್ಯ ಸಚಿವ ಆನಂದ್​ ಸಿಂಗ್​ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿರುವ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಬಗ್ಗೆ ಬುಧವಾರ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ಸಿಕ್ಕ ಕೂಡಲೇ ಆನಂದ್ ಸಿಂಗ್​ ಈ ರೀತಿ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯಾಗೋದು ನನಗೆ ಮುಖ್ಯ. ವಿಜಯನಗರ ಜಿಲ್ಲೆಯ ಮುಂದೆ ಸಚಿವ ಸ್ಥಾನ ತೃಣಕ್ಕೆ ಸಮಾನ ಎಂದಿರುವ ಆನಂದ್​ ಸಿಂಗ್​, ವಿಜಯನಗರ ಜಿಲ್ಲೆ ಘೋಷಣೆ ಮಾಡಿದ ಯಡಿಯೂರಪ್ಪ ವಿಜಯನಗರದ ವೀರಪುತ್ರ ಎಂದು ಭಾವುಕರಾದರು.
ಮನೆಯಲ್ಲಿ ಅಣ್ಣ-ತಮ್ಮಂದಿರು ಬೇರೆಯಾದರೆ ನೋವು ಇರುತ್ತದೆ. ಜಿಲ್ಲೆ ವಿಭಜನೆ ಆದರೆ ಭಿನ್ನಾಭಿಪ್ರಾಯ ಇರೋದಿಲ್ವಾ? ಶಾಸಕ ಸೋಮಶೇಖರ ರೆಡ್ಡಿ ಜತೆಗೆ ಮಾತನಾಡುವೆ.‌ ಈಗಾಗಲೇ ಯಡಿಯೂರಪ್ಪ ಕೂಡ ರೆಡ್ಡಿ ಜತೆ ಮಾತನಾಡಿದ್ದಾರೆ. ಜಿಲ್ಲೆಯ ವಿಚಾರದಲ್ಲಿ ಪ್ರತಿಷ್ಠೆ ಬೇಡ. ನಾವೆಲ್ಲರೂ ಅಣ್ಣ-ತಮ್ಮಂದಿರು ಎನ್ನುವ ಮೂಲಕ ಸೋಮಶೇಖರ ರೆಡ್ಡಿ ಅವರ ಮನವೊಲಿಸುವ ಯತ್ನವನ್ನು ಆನಂದ ಸಿಂಗ್ ಮಾಡಿದರು.
ವಿಜಯಯಪುರವನ್ನು ನೂತನ ಜಿಲ್ಲೆಯನ್ನಾಗಿ ಮಾಡಲು ತಾತ್ವಿಕ ಅನುಮೋದನೆ ಪಡೆದು ಬೆಂಗಳೂರಿಂದ ಹೊಸಪೇಟೆಗೆ ಹೆಲಿಕಾಪ್ಟರ್​ನಲ್ಲಿ ಬಂದಿಳಿಯುತ್ತಿದ್ದಂತೆ ಆನಂದ ಸಿಂಗ್​ಗೆ ನೂರಾರು ಜನರು ಹೂವಿನ ಮಳೆ ಸುರಿಸಿ ಶುಭಕೋರಿದರು.
ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ

ನ.19ಕ್ಕೆ ಡಿಕೆಶಿ ಪುತ್ರಿ-ಎಸ್​.ಎಂ.ಕೃಷ್ಣ ಮೊಮ್ಮಗನ ಮದುವೆ ನಿಶ್ಚಿತಾರ್ಥ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 1 =
Remember me
