ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್, ಜನಸಾಮಾನ್ಯರಂತೆ ರಸ್ತೆ ಬದಿ ಊಟ ಸೇವಿಸಿದರು.
ದೊಡ್ಡಬಿದರಕಲ್ಲು ವಾರ್ಡ್​ನಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಕುಳಿತು ಅನ್ನ, ರಸಂ ಸೇವಿಸಿದ ಸಚಿವರ ಸರಳತೆಯನ್ನು ಕಂಡು ಸಾರ್ವಜನಿಕರು ಅಚ್ಚರಿ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಕ್ಕಟ್ಟು: ಈ ಎರಡು ಕ್ಷೇತ್ರಗಳಲ್ಲಿ ಈಗ ತ್ರಿಕೋನ ಕದನ
ಅಂಧ್ರಹಳ್ಳಿ, ದೊಡ್ಡಬಿದರಕಲ್ಲು ವಾರ್ಡ್ ನಲ್ಲಿ ಸೋಮಶೇಖರ್ ಪ್ರಚಾರ ನಡೆಸಿದರು. ಈ ವೇಳೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.
ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್, ವಾರ್ಡ್​ನ ಜನತೆ ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ. ಅತಿ ಹೆಚ್ಚು ಮತಗಳು ಈ ಭಾಗದಿಂದ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೊಡ್ಡಬಿದರಕಲ್ಲು 2ನೇ ಅತಿದೊಡ್ಡ ವಾರ್ಡ್ ಎನಿಸಿದ್ದು, ಬಹುತೇಕ ರಸ್ತೆಗಳಲ್ಲಿ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ, ರಾಜ ಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಸೋಮಶೇಖರ್ ಹೇಳಿದರು.
ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ

ಸಪ್ತಗಿರಿಗೌಡ ಪರ ಮೋಹನ್ ಭರ್ಜರಿ ಪ್ರಚಾರ

ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಕ್ಕಟ್ಟು: ಈ ಎರಡು ಕ್ಷೇತ್ರಗಳಲ್ಲಿ ಈಗ ತ್ರಿಕೋನ ಕದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 9 =
Remember me
