ಬೆಂಗಳೂರು:ದೇಶದಲ್ಲೇ ವಿನೂತನ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದ್ದು, ಸಕ್ರಿಯವಾಗಿರುವ ಕ್ಷಯ ರೋಗಿಗಳನ್ನು ಪತ್ತೆ ಮಾಡುವ ಪ್ರಕ್ರಿಯೆ ಇದೇ ಆ.14 ರಿಂದ 30ರ ವರೆಗೂ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಗದಿಂದ ಈ ತನಕ 28 ಲಕ್ಷ ಜನ ಗುಣಮುಖರಾಗಿದ್ದಾರೆ. ಕೋವಿಡ್ ನಲ್ಲಿ ಕಪ್ಪು ಶಿಲೀಂಧ್ರಗಳ ಪತ್ತೆ ಮಾಡುವ ತಪಾಸಣೆ ನಡೆಯುತ್ತಿದ್ದು, ಅದೇ ಮಾದರಿಯಲ್ಲಿ ಕ್ಷಯ ರೋಗ ಪತ್ತೆ ಮಾಡಲಾಗುವುದು ಎಂದರು. ದೊಡ್ಡ ಮಟ್ಟದಲ್ಲಿ ವ್ಯಾಪಿಸದ ರೀತಿಯಲ್ಲಿ ಅವರ ಅಭಿಪ್ರಾಯದಂತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಕಳೆದ ಐದು ವರ್ಷದಿಂದ ಕ್ಷಯ ರೋಗ ಹೆಚ್ಚಾಗಿದೆ. ಶೇ.33 ರಷ್ಟು ಕ್ಷಯ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.
ಇಲ್ಲಿಯವರೆಗೂ ನಾವು ಯಾವ್ಯಾವ ವೃತ್ತಿಯಲ್ಲಿ ಹೆಚ್ಚು ಬರಲಿದೆ ಎಂದು ತಪಾಸಣೆ ಮಾಡಿದ್ದೇವೆ. ಆರ್ಥಿಕ ಸ್ಥಿತಿಗತಿಗಳ ಪ್ರಕಾರವೂ ಸರ್ವೆ ಮಾಡಲಾಗಿದ್ದು, ತಪಾಸಣೆ ಮಾಡಲಾಗಿದೆ. ಇದರ ಜೊತೆಯಲ್ಲಿ ಕೋವಿಡ್ ಬಂದವರಲ್ಲೂ ತಪಾಸಣೆ ಮಾಡಲಾಗುವುದು. ಯಾರೆಲ್ಲಾ ಸೋಂಕಿತರಾಗಿದ್ದು, ಗುಣಮುಖರಾಗಿದ್ದೀರಾ ಅವರೆಲ್ಲಾ ತಪಾಸಣೆ ಮಾಡಿಸಿಕೊಳ್ಳಿ ಎಂದು ಕರೆ ನೀಡಿದರು.
ಕ್ಷಯ ಮೊದಲೇ ತಪಾಸಣೆ ಮಾಡಿಸಿಕೊಂಡರೆ, ಅದನ್ನ ಆರಂಭದಲ್ಲೇ ತಡೆಯಬಹುದು. 3.9 ರಷ್ಟು ಜನರಿಗೆ ಕ್ಷಯ ರೋಗವಿತ್ತು. 2019-20ರಲ್ಲಿ ತಪಾಸಣೆ ಮಾಡಿದಾಗ ಕಡಿಮೆಯಾಗಿದೆ. ಕೋವಿಡ್ ಬಂದ ಹಿನ್ನೆಲೆ ತಪಾಸಣೆ ಕಡಿಮೆ ಮಾಡಲಾಗಿತ್ತು. ಹೀಗಾಗಿ ಕಡಿಮೆ ಆಗಿದೆ ಅಂತ ಬಾವಿಸಿಲ್ಲ. 1.25 ಕೋಟಿ ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. 79,938 ಜನರ ಪೈಕಿ, 2,714 ಜನರಿಗೆ ಪಾಸಿಟಿವ್ ಬಂದಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕಿದೆ. ಸಾಂಕ್ರಾಮಿಕ ರೋಗ ಎಂದು ಹೇಳಲು ಸಾಧ್ಯವಿಲ್ಲ. ಆದರೆ ವ್ಯಕ್ತಿ ಇಂದ ಮನೆಯವರಿಗೆ ಬರುವ ಸಾಧ್ಯತೆ ಇದೆ. ಕೆಲಸ ಮಾಡುವ ಸ್ಥಳದಿಂದಲೂ ಬರುವ ಸಾಧ್ಯತೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × two =
Remember me
