ಬೆಂಗಳೂರು:ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಆಘಾತದ ಮೇಲೆ ಆಘಾತ ಒದಗಿಬರುತ್ತಿದೆ. ಅವರ ಮನೆಯ ಅಡುಗೆ ಕೆಲಸದ ವ್ಯಕ್ತಿಗೆ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರ ಇಡೀ ಕುಟುಂಬ ಕರೊನಾ ಪರೀಕ್ಷೆಗೆ ಸೋಮವಾರ ಒಳಗಾಗಿತ್ತು.
ಅದರಲ್ಲಿ ಸುಧಾಕರ್ ಅವರ ತಂದೆ ಪಿ.ಎನ್. ಕೇಶವರೆಡ್ಡಿ ಅವರಿಗೆ ಕರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ‘‘ಕುಟುಂಬದ ಇತರ ಸದಸ್ಯರ ವರದಿಗಾಗಿ ಕಾಯುತ್ತಿದ್ದೇನೆ. ನಮಗೆ ನಿಮ್ಮೆಲ್ಲರ ಶುಭ ಹಾರೈಕೆ ಇರಲಿ’’ ಎಂದು ಸುಧಾಕರ್ ಟ್ವಿಟರ್‌ನಲ್ಲಿ ಕೋರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿಯ ಹಾಲಿ ಸದಸ್ಯರಾಗಿರುವ 82 ವರ್ಷ ವಯಸ್ಸಿನ ಕೇಶವರೆಡ್ಡಿ ಅವರು ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದಾರೆ ಎಂದು ಸುಧಾಕರ್ ಮಧ್ಯಾಹ್ನವಷ್ಟೇ ತಿಳಿಸಿದ್ದರು. ಈಗ ಅವರ ಕುಟುಂಬದ ಇತರ ಸದಸ್ಯರ ಆರೋಗ್ಯ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.
40 ವರ್ಷದ ಬಳಿಕ ಗ್ರಹಣ ದಿನದಂದು ಕಾವೇರಿ ನದಿಯಲ್ಲಿ ಡಿಕೆಶಿ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
