ಬೆಂಗಳೂರು:ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ಬಗ್ಗೆ ಅನುಕಂಪ ವ್ಯಕ್ತಪಡಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿ ಪರಿಣಮಿಸಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ಮತರಾಜಕಾರಣಕ್ಕಾಗಿ ಇಂಥ ಹೇಳಿಕೆ ನೀಡಿರುವುದು ಖಂಡನೀಯ. ಈ ರೀತಿ ಸುತ್ತಿ ಬಳಸಿ ಮಾತನಾಡುವ ಬದಲು ಉಗ್ರ ಕೃತ್ಯ ಎಸಗುವವರನ್ನೆಲ್ಲ “ದೇ ಆರ್ ಮೈ ಬ್ರದರ್ಸ್” ಎಂದು ಹೇಳಿ‌ಬಿಡಿ ಎಂದು ಟೀಕಿಸಿದ್ದಾರೆ.
ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಟ್ವೀಟ್ ಬಗ್ಗೆಯೂ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್​ಐಎ ತನಿಖೆ ಬಗ್ಗೆ ಗುಮಾನಿಯ ಮಾತನಾಡಿದ್ದಾರೆ. ಹಾಗಾದರೆ ಸ್ಫೋಟ ಪ್ರಕರಣದ ತನಿಖೆಯನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮೂಲಕ ಮಾಡಿಸಬೇಕೆ? ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಡಿಜೆಹಳ್ಳಿ, ಕೆಜೆಹಳ್ಳಿ ಘಟನೆ ನಡೆದಾಗಲೂ ಶಿವಕುಮಾರ್ ಇದೇ ರೀತಿ ಮಾತನಾಡಿದ್ದರು. ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳನ್ನು ನನ್ನ ಸೋದರರು ಎಂದು ಕರೆದುಕೊಂಡಿದ್ದರು. ಈಗ‌ ಮಂಗಳೂರು ಬ್ಲಾಸ್ಟ್ ಪ್ರಕರಣದ ಆರೋಪಿಗಳ ಬಗ್ಗೆಯೂ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಉಗ್ರರೆಲ್ಲ ನಿಮ್ಮ ಬಂಧುಗಳಾಗುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
