ಬೆಂಗಳೂರು:ಸಚಿವ ಉಮೇಶ್ ಕತ್ತಿ (61) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಇಂದು ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ ಇರಿಸಿ, ಚಿಕಿತ್ಸೆ ನೀಡುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ಇಂದು ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
|ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಇವರು 1961ರ ಮಾ. 14ರಂದು ಜನಿಸಿದ್ದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗಿದ್ದ ಇವರು ಆಹಾರ ಮತ್ತು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇವರು ಎಂಟು ಬಾರಿ ವಿಧಾನಸಭೆಗೆ ಆಯ್ಕೆಯಾದ ಅತ್ಯಂತ ಹಿರಿಯ ಶಾಸಕ. ಜನತಾ ಪರಿವಾರದಲ್ಲಿದ್ದ ಇವರು, ಕಾಂಗ್ರೆಸ್​​ಗೆ ಸೇರಿ, ಬಳಿಕ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದರು.
ಪತಿಯ ಕಾಲು ಕತ್ತರಿಸಿ ಪತ್ನಿಯ ಕೈಗಿಟ್ಟ ಆಸ್ಪತ್ರೆ ಸಿಬ್ಬಂದಿ; ಅದನ್ನು ವಾಪಸ್ ಪಡೆದಿದ್ದಾಗಿ ಮಿಮ್ಸ್​ ಮುಖ್ಯಸ್ಥರ ಸ್ಪಷ್ಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + seventeen =
Remember me
