
ಬೆಂಗಳೂರು:ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದರು.
ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳುತ್ತೀರಲ್ಲವೆ? ನಿಮಗೆ ಏನಿದೆ ಎಂದು ನಾನು ಕೇಳಲು ಬಯಸುತ್ತೇನೆ. ದೂರು ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಪ್ರಶ್ನಿಸಿದರು.
ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ, ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಚ್ವು , ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲ, ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + nine =
Remember me
