ವಿಜಯಪುರ:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್​ ಮತ್ತು ಗ್ಯಾಂಗ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಅವರ ರಕ್ಷಣೆಗೆ ಕೆಲ ಕಾಂಗ್ರೆಸ್​ ಹಾಗೂ ಬಿಜೆಪಿ ಶಾಸಕರು ಮುಂದಾಗಿದ್ದರು ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಇದರಲ್ಲಿ ಪ್ರಮುಖವಾಗಿ ಸಚಿವ ಜಮೀರ್​ ಅಹ್ಮದ್​ ಅವರ ಹೆಸರು ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್​ ಸ್ಪಷ್ಟನೆ ನೀಡಿದ್ದು, ನಾನು ಒತ್ತಡ ಹಾಕಿಲ್ಲ ಎಂದು ಹೇಳಿದ್ದಾರೆ.
ವಿಜಯಪುರಲ್ಲಿ ಈ ಕುರಿತು ಮಾತನಾಡಿದ ಸಚಿವ ಜಮೀರ್​, ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ರನ್ನು ಕಾಪಾಡಲು ಪೊಲೀಸರ ಮೇಲೆ ಯಾರು ಒತ್ತಡ ಹಾಕಿಲ್ಲ. ನಾನು ಪೊಲೀಸರ ಮೇಲೆ ಒತ್ತಡ ಹಾಕಿದ್ದೇನೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ನಾನು ಪೊಲೀಸರ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ; ಟೀಮ್​ ಇಂಡಿಯಾ ಕೋಚ್​ ಹುದ್ದೆ ಕುರಿತು​ ಶಾಕಿಂಗ್ ಹೇಳಿಕೆ ಕೊಟ್ಟ ಗೌತಮ್​ ಗಂಭೀರ್
ದರ್ಶನ್ ಹಾಗೂ ನಾನು ಒಳ್ಳೆಯ ಸ್ನೇಹಿತರು ಆ ವಿಚಾರದಲ್ಲಿ ಇಲ್ಲ ಎಂದು ಹೇಳಲ್ಲ. ಇಂಥ ಘಟನೆ ನಡೆದಾಗ  ಯಾರು ಅವರ ಪರ ನಿಲ್ಲುತ್ತಾರೆ. ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಉಪ್ಪು ತಿಂದವ ನೀರು ಕುಡಿಯಲೇಬೇಕು. ತಪ್ಪು ಯಾರೇ ಮಾಡಲಿ, ದರ್ಶನ್ ಇದ್ದರೂ ಅಷ್ಟೇ, ಇನ್ನೊಬ್ಬರು ಇದ್ದರಷ್ಟೇ ಶಿಕ್ಷೆ ಆಗಲೇಬೇಕು. ಕಾನೂನಿನ ಚೌಕಟ್ಟಿಯಲ್ಲಿ ತನಿಖೆ ನಡೆಯುತ್ತಿದೆ. ಅವರನ್ನ ಜೈಲಿಗೆ ಕಳಿಸಲಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಮುಂದಿನ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ಇನ್ನೂ ದರ್ಶನ್​ ಅವರ ಸಮರ್ಥಿಸಿಕೊಂಡು ಕಾಂಗ್ರೆಸ್​ ಶಾಸಕರು ಹೇಳಿಕೆ ನೀಡುತ್ತಿರುವ ಕುರಿತು ಮಾತನಾಡಿದ ಸಚಿವ ಜಮೀರ್​, ಅವರ ಅಭಿಪ್ರಾಯ ಅವರು ಹೇಳಿದ್ದಾರೆ, ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಇದರಲ್ಲಿ ಏನಿದೆ ಎಂದು ಸಚಿವ ಜಮೀರ್​ ಅಹ್ಮದ್​ ರೇಣುಕಸ್ವಾಮಿ ಹತ್ಯೆ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three + 5 =
Remember me
