ನವದೆಹಲಿ:ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುವುದು ಬಹುತೇಕ ಖಚಿತ ಎಂದು ಬಿಜೆಪಿ ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕಾಗಿ ಕಾದು ಸುಸ್ತಾಗಿ, ಹತಾಶರಾಗಿದ್ದ ಆಕಾಂಕ್ಷಿಗಳಿಗೆ ಹೊಸ ವರ್ಷದ ವೇಳೆ ಹೈಕಮಾಂಡ್​ನಿಂದ ‘ಗಿಫ್ಟ್’ ಸಿಗುವ ಲಕ್ಷಣ ಗೋಚರಿಸಿದೆ.
ಸಿಎಂ ಯಡಿಯೂರಪ್ಪ ಸೇರಿ ರಾಜ್ಯ ಬಿಜೆಪಿ ಘಟಕ ಕಳೆದ ಹಲವು ದಿನಗಳಿಂದ ವಿಸ್ತರಣೆಗೆ ಒತ್ತಾಯಿಸಿದ್ದರೂ ಹೈಕಮಾಂಡ್ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಸಂಕ್ರಾಂತಿ ವೇಳೆ ಖಾಲಿ ಇರುವ ಎಲ್ಲ ಸ್ಥಾನಗಳು ಭರ್ತಿಯಾಗಲಿವೆ ಎಂದು ಹೇಳಲಾಗಿದೆ. ಬೇರೆ ಪಕ್ಷದಿಂದ ಬಂದು ಸರ್ಕಾರ ರಚನೆಗೆ ಕಾರಣವಾಗಿದ್ದ ಎಂಟಿಬಿ ನಾಗರಾಜ್ ಮತ್ತು ಆರ್.ಶಂಕರ್​ಗೆ ಸಚಿವ ಸ್ಥಾನದ ಭರವಸೆ ನೀಡಲಾಗಿದ್ದು, ಈಚಿಗಷ್ಟೆ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮುನಿರತ್ನಗೆ ಸಚಿವ ಸ್ಥಾನ ಸಿಗಲಿದೆಯೋ ಇಲ್ಲವೋ ಎಂಬುದು ಖಚಿತವಾಗಿಲ್ಲ. ಕೆಲ ಬಿಜೆಪಿ ನಾಯಕರು ಮುನಿರತ್ನಗೆ ಸಚಿವ ಸ್ಥಾನ ನೀಡಬೇಕೆಂದು ಹೇಳಿದ್ದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೀಡುವ ಅಭಿಪ್ರಾಯಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಮೂರು ಸಚಿವ ಸ್ಥಾನ ವಲಸೆ ಬಂದ ಶಾಸಕರಿಗೆ ಸಿಕ್ಕಲ್ಲಿ ಉಳಿದ 4 ಸ್ಥಾನಗಳನ್ನು ಪಕ್ಷದ ಹಿರಿಯ ಶಾಸಕರಿಗೆ ಹಂಚಲಾಗುವುದು. ಸದ್ಯ 7 ಸ್ಥಾನಗಳು ಖಾಲಿಯಿದ್ದು, ಯಾವುದೇ ಖಾತೆಯನ್ನು ಖಾಲಿ ಬಿಡುವ ಸಾಧ್ಯತೆ ಕಡಿಮೆ ಎನ್ನುವುದು ಬಿಜೆಪಿ ನಾಯಕರೊಬ್ಬರ ಅಭಿಪ್ರಾಯ. ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವ ಶಶಿಕಲಾ ಜೊಲ್ಲೆ ಕೈಬಿಟ್ಟು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್​ಗೆ ಸ್ಥಾನ ನೀಡಬೇಕೆಂಬ ಲೆಕ್ಕಾಚಾರ ರಾಜ್ಯ ಬಿಜೆಪಿ ನಾಯಕರಲ್ಲಿದೆ. ಧಾರ್ವಿುಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಬದಲಿಗೆ ಅದೇ ಸಮುದಾಯದ ಕಾರ್ಕಳ ಶಾಸಕ ಸುನೀಲ್​ಕುಮಾರ್​ಗೆ ಅವಕಾಶ ನೀಡುವ ಬಗ್ಗೆಯೂ ಚರ್ಚೆಯಾಗಿದೆ. ಇವೆಲ್ಲದರ ಮಧ್ಯೆ ಕಳೆದೆರೆಡು ದಿನಗಳಿಂದ ದೆಹಲಿಯಲ್ಲಿದ್ದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ್ದು, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಅಮಿತ್ ಷಾ ರಾಜ್ಯಕ್ಕೆ
ಜನವರಿ 15ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರಲಿದ್ದು, 16ರಂದು ಶಿವಮೊಗ್ಗದ ಭದ್ರಾವತಿಯಲ್ಲಿ ಕೇಂದ್ರ ಮೀಸಲು ಪಡೆಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗಿ ಯಾಗಲಿದ್ದಾರೆ. ಮೊದಲು ಬೆಂಗಳೂರಿಗೆ ಬಂದು, ಅಲ್ಲಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಶಿವಮೊಗ್ಗ ಕಾರ್ಯಕ್ರಮ ಬಳಿಕ ಹೊಸಪೇಟೆಯ ಕಾರ್ಯಕ್ರಮವೊಂದರಲ್ಲೂ ಷಾ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
