ಬೆಂಗಳೂರು:ಕರೊನಾ ತಂದಿಟ್ಟ ಸಂಕಷ್ಟ ಅಷ್ಟಿಷ್ಟಲ್ಲ. ಲಾಕ್​ಡೌನ್​ ಘೋಷಣೆ ಆಗ್ತಿದ್ದಂತೆ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡರು. ದೇಶ ಮಾತ್ರವಲ್ಲ, ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿತು. ರಾಜ್ಯದ ಬೊಕ್ಕಸ ಖಾಲಿ ಆಗಿದ್ದಲ್ಲದೆ, ಸರ್ಕಾರಿ ಉದ್ಯೋಗಿಗಳ ವೇತನ ಪಾವತಿಗೂ ಹಣ ಇರಲಿಲ್ಲ.
ಖಾಸಗಿ ಉದ್ಯೋಗಿಗಳ ವೇತನ ಕಡಿತ, ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದರಿಂದ ಕೋಟ್ಯಂತರ ಜನ ಬದುಕಿನ ಬಂಡಿದೂಡಲು ಹೆಣಗಾಡುತ್ತಿದ್ದಾರೆ. ಇದರ ಜತೆಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಬಿಸಿ ಬಡ-ಮಧ್ಯಮ ವರ್ಗದ ಜನರ ಕೈ ಸುಡುತ್ತಿದೆ. ಉದ್ಯೋಗ, ಸೂಕ್ತ ವೇತನ ಸಿಗದೆ ಲೆಕ್ಕವಿಲ್ಲದಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವೂ ಆರ್ಥಿಕ ಕೊರತೆಯ ನೆಪವೊಡ್ಡಿ ಹಲವು ಯೋಜನೆಗೆ ತಾತ್ಕಾಲಿಕ ಬ್ರೇಕ್​ ಹಾಕಿದೆ. ಇಂತಹ ಸಂಕಷ್ಟ ಕಾಲದಲ್ಲೂ ರಾಜ್ಯದ ಸಂಸದರು ಮತ್ತು ಸಚಿವರ ಕಾರು ಖರೀದಿ ಮೊತ್ತವನ್ನ ರಾಜ್ಯ ಸರ್ಕಾರ ಹೆಚ್ಚಿಸಿದೆ. ಕರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸಚಿವರು ಮತ್ತು ಸಂಸದರ ದರ್ಬಾರಿಗೆ ಯಾವುದೇ ಅಡ್ಡಿ ಇಲ್ಲ.
ರಾಜ್ಯದ ಎಲ್ಲ ಸಚಿವರು ಮತ್ತು ಸಂಸದರು ಇನ್ಮುಂದೆ 23 ಲಕ್ಷ ರೂ. ವೆಚ್ಚದಲ್ಲಿ ಕಾರು ಖರೀದಿಸಲು ಅವಕಾಶವಿದೆ. ಈ ಮೊದಲು ಹೊಸ ಕಾರು ಖರೀದಿಗೆ ರಾಜ್ಯ ಸರ್ಕಾರ 22 ಲಕ್ಷ ರೂ. ವೆಚ್ಚ ಭರಿಸುತ್ತಿತ್ತು. ಈ ಮೊತ್ತ ಹೆಚ್ಚಿಸಲು ಸಚಿವರು ಮತ್ತು ಸಂಸದರಿಂದ ಒತ್ತಡ ಬಂದಿತ್ತು. ಇವರ ಒತ್ತಡಕ್ಕೆ ಮಣಿದ ಸರ್ಕಾರ, ಹೊಸ ಕಾರು ಖರೀದಿಗೆ 23 ಲಕ್ಷ ರೂಪಾಯಿ ನೀಡಲು ಸಮ್ಮತಿಸಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ನಾಟಕ ಪ್ರದರ್ಶನದಲ್ಲಿ ಮೈಮೇಲೆ ಬಂದ ಚಾಮುಂಡಿ ದೇವಿ! ವಿಡಿಯೋ ವೈರಲ್​

ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
