ಬೆಂಗಳೂರು:ರಾಜ್ಯದ 19 ಜಿಲ್ಲೆಗಳು ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ್ದರೂ ಬಹುತೇಕ ಜಿಲ್ಲೆಗಳಲ್ಲಿ ಸಚಿವರು ಹಾಗೂ ಕಾರ್ಯದರ್ಶಿಗಳು ಉಸ್ತುವಾರಿ ಹೊಣೆಯನ್ನೇ ಮರೆತಿದ್ದಾರೆ.
ಉಪ ಚುನಾವಣೆಯ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಬಹುತೇಕ ಸಚಿವರು ತಮ್ಮ ಉಸ್ತುವಾರಿಯ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ನಿರ್ಲಕ್ಷ್ಯ ಮನೋಭಾವ ತೋರುತ್ತಿದ್ದಾರೆ. ಇದರಿಂದಾಗಿ ಪರಿಹಾರ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿದ್ದು ಪರಿಹಾರ ಕಾರ್ಯಗಳ ಕಡೆ ಗಮನ ಹರಿಸಬೇಕಾಗಿದೆ. ಕರೊನಾ ನಿರ್ವಹಣೆಯಲ್ಲಿ ಹೈರಾಣಾಗಿರುವ ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ವಿಶ್ವಾಸ ತುಂಬುವ ಕಾರ್ಯವನ್ನು ಮಾಡಬೇಕಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಬೆಂಗಳೂರಿನಿಂದ ಜಿಲ್ಲಾಡಳಿತದ ಜತೆಗೆ ಸಮನ್ವಯ ಸಾಧಿಸಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪ್ರತಿ ತಿಂಗಳು ಭೇಟಿ ನೀಡಿ ಪರಿಶೀಲನೆ ಮಾಡಬೇಕು, ತಾಲೂಕು ಕೇಂದ್ರಗಳಿಗೂ ಹೋಗಬೇಕು. ಪ್ರವಾಸ ಮಾಡಿಬಂದ ಹದಿನೈದು ದಿನಗಳಲ್ಲಿ ವರದಿ ನೀಡಬೇಕೆಂಬ ನಿಯಮಗಳು ಕೇವಲ ಕಾಗದದಲ್ಲಿವೆ ಹೊರತು ಜಾರಿಗೆ ಬರುತ್ತಿಲ್ಲ. ಯಾವುದೇ ಉಸ್ತುವಾರಿ ಕಾರ್ಯದರ್ಶಿ ಸಲ್ಲಿಸಿರುವ ವರದಿ ಸರ್ಕಾರದ ಬಳಿಯಲ್ಲಿ ಇಲ್ಲ.
ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಹಾವೇರಿ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಶಿವರಾಮ ಹೆಬ್ಬಾರ, ಗದಗ ಜಿಲ್ಲೆಯ ಉಸ್ತುವಾರಿ ಮಂತ್ರಿ ಸಿ.ಸಿ. ಪಾಟೀಲ ಮಾತ್ರ ಪ್ರವಾಹ ಪರಿಸ್ಥಿತಿ ನಿರ್ವಣವಾದಗಿನಿಂದಲೂ ಜಿಲ್ಲೆಗಳಲ್ಲೇ ಇದ್ದು ಜನರ ಮೊರೆಗೆ ಸ್ಪಂದಿಸಿದ್ದಾರೆ. ಈ ಮೂರು ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳೂ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
