ಬೆಂಗಳೂರು:ಗ್ಯಾರಂಟಿ ಯೋಜನೆಗಳೆಡೆ ಹೆಚ್ಚು ಗಮನ ಕೊಡಬೇಕು, ಜನರ ನಡುವೆ ಹೆಚ್ಚೆಚ್ಚು ಚರ್ಚೆಯಲ್ಲಿರಬೇಕು ಎಂದು ಸಿದ್ದರಾಮಯ್ಯ ಸರ್ಕಾರ ಬಯಸಿದರೆ, ಒಂದರಮೇಲೊಂದು ನಡೆದಿರುವ ಅಪನಂಬಿಕೆ, ಅನುಮಾನ, ಅಸಮಾಧಾನದ ಬೆಳವಣಿಗೆಗಳು ಕಾಂಗ್ರೆಸ್ ನಾಯಕರನ್ನು ಕಸಿವಿಸಿಗೆ ತಳ್ಳಿವೆ. ಅಷ್ಟೇ ಅಲ್ಲದೆ, ಹೈಕಮಾಂಡ್ ಕೂಡ ಸಚಿವ- ಶಾಸಕರ ನಡೆಯ ಬಗ್ಗೆ ಕೆಂಗಣ್ಣು ಬೀರಿದೆ. ಸಿಂಗಾಪುರದಿಂದ ಸರ್ಕಾರವನ್ನು ಅಸ್ಥಿರತೆಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಡಿದ ಮಾತು ಚರ್ಚೆಯಲ್ಲಿರುವಾಗಲೇ, ಸಚಿವರ ಕಾರ್ಯವೈಖರಿ ವಿರುದ್ಧ ಹಿರಿಯ ಶಾಸಕರ ಗುಂಪು ಅಸಮಾಧಾನಗೊಂಡು ಸಹಿ ಸಂಗ್ರಹಿಸಲು ಮುಂದಾಗಿದೆ.
ಇಷ್ಟರ ನಡುವೆ ಪತ್ರದ ಪ್ರತಿಯೊಂದು ಸಾರ್ವಜನಿಕವಾಗಿ ಹರಿದಾಡಿದ್ದು ಪಕ್ಷಕ್ಕೆ, ಸರ್ಕಾರಕ್ಕೆ ತೀವ್ರ ಮುಜುಗರ ಹುಟ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಸೂಚನೆ ಮೇರೆಗೆ ಆ ಪತ್ರ ಅಧಿಕೃತವಲ್ಲ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ್ ಮಾಧ್ಯಮದ ಮುಂದೆ ಕಾಣಿಸಿಕೊಂಡು ಪ್ರತಿಕ್ರಿಯೆಯನ್ನೂ ನೀಡುವಂತಾಯಿತು. ಅಷ್ಟರಲ್ಲಾಗಲೇ ಆ ಪತ್ರ ಸಾಕಷ್ಟು ವೈರಲ್ ಆಗಿ ಪಕ್ಷದ ನಾಯಕರಿಗೆ ಮುಜುಗರ ಉಂಟಾಗಿತ್ತು. ಪ್ರತಿಪಕ್ಷ ಬಿಜೆಪಿಯು ಆ ಪತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್​ಗೆ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿತ್ತು.
ಸಚಿವರ ಬಗ್ಗೆ ಶಾಸಕರು ಅಸಮಾಧಾನ ಹೊರಹಾಕಿಲ್ಲ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಪತ್ರ ಬರೆದಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದು 2 ತಿಂಗಳಾಗಿದೆ. ಕಳೆದ ವಾರ ರಾಹುಲ್ ಗಾಂಧಿ ಬಂದಿದ್ದರಿಂದ ಸಭೆ ಕರೆಯಲು ಆಗಿಲ್ಲ. ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇವೆ. ಸಿಂಗಾಪುರದಲ್ಲಿ ಕುಳಿತು ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆಯೇ ಎಂಬುದು ನನಗೆ ಗೊತ್ತಿಲ್ಲ.
| ಸಿದ್ದರಾಮಯ್ಯ, ಮುಖ್ಯಮಂತ್ರಿ
ಎಲ್ಲ ಊಹಾಪೋಹ. ಶಾಸಕರು ಯಾವುದೇ ಪತ್ರ ಬರೆದಿಲ್ಲ. ಶಾಸಕರು ಅವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸಚಿವರೂ ಮಾತು ಕೇಳುತ್ತಿದ್ದಾರೆ.
| ಡಿ.ಕೆ. ಶಿವಕುಮಾರ್, ಡಿಸಿಎಂ
ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ, ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂದು ಸಿಎಂಗೆ ಕೋರಿಕೆ ಇಡುವ ಪತ್ರದಲ್ಲಿ ಉಲ್ಲೇಖವಿತ್ತು. ಸ್ಥಳೀಯ ಶಾಸಕರಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರ ವಿಷಯ. ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬ ಕೋರಿಕೆ ಪತ್ರದಲ್ಲಿತ್ತು.
ಸರ್ಕಾರಕ್ಕೆ ಬಾಲಗ್ರಹ ಪೀಡೆ:ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದೆ. ಈ ಸರ್ಕಾರಕ್ಕೆ ಬಾಲಗ್ರಹ ಪೀಡೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗ್ಯಾರಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ಶಾಸಕರೇ ಬಹಿರಂಗವಾಗಿ ಹೇಳಿದ್ದಾರೆ. ಸಚಿವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ.
ಪಾಕ್​ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!

ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
