ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನೆಲ್ಲೇ ಭುಗಿಲೆದ್ದ ಖಾತೆ ಕ್ಯಾತೆಗೆ ಇಂದು ತಾರ್ಕಿಕ ಅಂತ್ಯ ಹಾಡಲಾಗಿದೆ. ಖಾತೆ ಬದಲಾವಣೆಯ ಆಟ ಮುಂದುವರಿದಂತೆ, ಅಸಂತುಷ್ಟ ಸಚಿವರು ವಾರದಿಂದ ಸಿಎಂನಿಂದ ಅಂತರ ಕಾಯ್ದುಕೊಂಡಿದ್ದರು. ಮತ್ತೊಮ್ಮೆ ಭಿನ್ನಮತ ಆಸ್ಫೋಟಗೊಂಡರೂ ಅಚ್ಚರಿ ಇಲ್ಲ ಎಂಬ ಸನ್ನಿವೇಶ ಸೃಷ್ಟಿಯಾಗಿದ್ದನ್ನು ಅರಿತ ಸಿಎಂ ಯಡಿಯೂರಪ್ಪ, ಇಂದು(ಸೋಮವಾರ) ಮತ್ತೆ ಕೆಲವರ ಖಾತೆ ಬದಲಾವಣೆ ಮಾಡಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ತನ್ನ ಕೈಯಿಂದ ಜೆ.ಸಿ. ಮಾಧುಸ್ವಾಮಿಗೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆಯುವಲ್ಲಿ ಡಾ.ಕೆ.ಸುದಾಕರ್ ಯಶಸ್ವಿಯಾಗಿದ್ದಾರೆ. ಆ ಮೂಲಕ ಸುಧಾಕರ್​ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜತೆಗೆ ವೈದ್ಯಕೀಯ ಶಿಕ್ಷಣ ಖಾತೆಯೂ ಸಿಕ್ಕಂತಾಗಿದೆ. ಇನ್ನು ಖಾತೆ ಅದಲು-ಬದಲು ಆಗುವ ಬಗ್ಗೆ ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮಾಧುಸ್ವಾಮಿಯ ಆಕ್ರೋಶ ಶಮನಕ್ಕೆ ಯತ್ನಿಸಿದ್ದ ಸಿಎಂ, ಪ್ರವಾಸೋದ್ಯಮದ ಜತೆಗೆ ಪರಿಸರ ವಿಜ್ಞಾನ ಖಾತೆಯನ್ನೂ ಕೊಟ್ಟಿದ್ದಾರೆ.ಇದನ್ನೂ ಓದಿರಿಸಚಿವ ಮಾಧುಸ್ವಾಮಿ ನಾಳೆ ಮಧ್ಯಾಹ್ನ ರಾಜೀನಾಮೆ
ಇನ್ನು ಸಿಎಂ ನಿರ್ಧಾರದಂತೆ ಪ್ರವಾಸೋದ್ಯಮ ಖಾತೆಯನ್ನ ಮಾಧುಸ್ವಾಮಿಗೆ ಬಿಟ್ಟುಕೊಟ್ಟ ಆನಂದ್ ಸಿಂಗ್​ಗೆ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಹಜ್ ಮತ್ತು ವಕ್ಫ್ ಖಾತೆ ಕೊಟ್ಟು ಸಮಾಧಾನ ಮಾಡಿದ್ದಾರೆ.
ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 19 =
Remember me
