ಚಿಕ್ಕಬಳ್ಳಾಪುರ:ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಶ್ರೀರಾಮ ವನವಾಸದಲ್ಲಿ ಮಾಂಸ ಸೇವಿಸಿದ್ದ; ಒಟಿಟಿ ಫ್ಲಾಟ್​ಫಾರ್ಮ್​ ಬಹಿಷ್ಕರಿಸುವಂತೆ ಆಗ್ರಹ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಧುಗಿರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಕಳೆದ ಮೂರು ದಿನಗಳ ಹಿಂದೆ ಊರಿಗೆ ಬಂದು ತನ್ನ ತಂದೆತಾಯಿಗೆ ಹೊಟ್ಟೆನೋವು ಎಂದು ತಿಳಿಸಿದ್ದಾಳೆ. ಕುಡಲೇ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಇದು ಹೊಟ್ಟೆ ನೋವಲ್ಲ ಹೆರಿಗೆ ನೋವೆಂದು ಪೋಷಕರಿಗೆ ತಿಳಿಸಿದ್ದಾರೆ.
ಇದಾದ ಕೆಲವೇ ಕ್ಷಣಗಳಲ್ಲಿ ಭಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ತಾಯಿ ಮಗುವನ್ನು ಹೆಚ್ಚಿನ ಆರೈಕೆಗಾಗಿ ಜಿಲ್ಲಾಸ್ಪತ್ರಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಸ್ವಯಂ ದೂರು ದಾಖಲಿಸಿಕೊಂಡಿರುವ ಬಾಗೇಪಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
