
ಬೆಂಗಳೂರು:ಸಣ್ಣ ನೀರಾವರಿ ಇಲಾಖೆಯಲ್ಲಿ ಬಾಕಿ ಬಿಲ್ ಪ್ರಕಾಣ ಹೆಚ್ಚಾಗಿರುವುದರಿಂದ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಈ ಸೂಚನೆ ನೀಡಿದರು.2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ. ಇತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಬಾಕಿಯಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
2023ರ ಏಪ್ರಿಲ್‌ಗೆ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಲು 22304 ಕೋಟಿ ರೂ ಬೇಕಿತ್ತು. 31-3-2023ರ ವರೆಗೆ 9602.37 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696.35 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ಇರುವುದರಿಂದ ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಲು ಸಿಎಂ ಸೂಚಿಸಿದರು.ರಾಜ್ಯದಲ್ಲಿರುವ 34 ಸಾವಿರಕ್ಕೂ ಹೆಚ್ಚು ಕೆರೆಗಳ ಸಮಗ್ರ ನಿರ್ವಹಣೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸುವ ಕುರಿತು ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಈ ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಕೆರೆ ಬಳಕೆದಾರರ ಸಂಘಗಳ ಬಲವರ್ಧನೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಹಣಕಾಸು ಇಲಾಖೆಗೆ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ಕೆರೆಗಳ ಸಂರಕ್ಷಣೆಯ ಪರಿಣತರು ಹಾಗೂ ಕಾಳಜಿ ಉಳ್ಳವರನ್ನು ಆಯ್ಕೆ ಮಾಡಲು ಸೂಚಿಸಿದರು.ಸಣ್ಣ ನೀರಾವರಿ ಇಲಾಖೆ ಹಾಗೂ ಭಾರಿ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಮೀನುಗಾರಿಕೆ ಗುತ್ತಿಗೆ ನೀಡುವ ಮೂಲಕ ಸಂಪನ್ಮೂಲ ಕ್ರೋಢೀಕರಿಸುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು.
ಏತ ನೀರಾವರಿ ಯೋಜನೆಗಳು:
ಕೆ.ಸಿ. ವ್ಯಾಲಿ 2ನೇ ಹಂತ, ಆನೇಕಲ್ ಏತ ನೀರಾವರಿ ಯೋಜನೆ, ಹೊಸಕೋಟೆ ಏತ ನೀರಾವರಿ ಯೋಜನೆ, ಬೆಂಗಳೂರು ಪೂರ್ವ ತಾಲ್ಲೂಕು ಏತ ನೀರಾವರಿ ಯೋಜನೆ, ಬಾಗೇಪಲ್ಲಿ ಏತ ನೀರಾವರಿ ಯೋಜನೆ, ವೃಷಭಾವತಿ ವ್ಯಾಲಿ ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದೆ. 2ನೇ ಹಂತದ ಸಂಸ್ಕರಿಸಿದ ನೀರು ಸುರಕ್ಷಿತವಾಗಿದೆ. ಆದರೆ ನಗರ ಸ್ಥಳೀಯ ಸಂಸ್ಥೆಗಳು ಕೊಳಚೆ ನೀರನ್ನು ಸಂಸ್ಕರಿಸದೆ ಬಿಡುವುದರಿಂದ ಕೆಲವು ಕೆರೆಗಳಿಗೆ ಕೊಳಚೆ ನೀರು ಹರಿಯುತ್ತಿರುವ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಪತ್ರ ಬರೆದಿರುವುದಾಗಿ ಸಚಿವ ಭೋಸರಾಜು ಅವರು ಸಿಎಂ ಗಮನ ಸೆಳೆದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ:*ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಲು ಸಿಎಂ ಸೂಚಿಸಿದರು.
*ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಮೂಲಕ ಸಭೆಯಲ್ಲಿಯೇ ಸಿಎಂ ಸೂಚಿಸಿದರು.
*ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
