ಬೆಂಗಳೂರು:ಪ್ರೇಮಿಗಳಲ್ಲಿ ಮನಸ್ತಾಪ ಮೂಡಿ, ಪ್ರೇಮದಲ್ಲಿ ಬಿರುಕುಂಟಾದ ಪ್ರಕರಣ ಒಬ್ಬರ ಸಾವಿನಲ್ಲಿ ಅಂತ್ಯಗೊಂಡಿದೆ. ಈ ಪ್ರಕರಣದಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪ್ರಿಯಕರನನ್ನು ಬಂಧಿಸಿದ್ದಾರೆ.
ಚಂದನಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಾಗರಾಜು ಬಂಧಿತ ಆರೋಪಿ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ಹೆಚ್ಚಾದ ಕರೊನಾತಂಕ: ರಾಜ್ಯದಲ್ಲಿ ಇಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕೂ ಅಧಿಕ…
ಇವರಿಬ್ಬರು ಬಾಗಲಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಾನ್ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು. ಇಬ್ಬರೂ 2 ವರ್ಷಗಳಿಂದ ಪ್ರೀತಿಸುತ್ತಿದ್ದು, ಪ್ರೇಮದ ವಿಚಾರವನ್ನು ಚಂದನಾ ತನ್ನ ಮನೆಯವರಿಗೂ ತಿಳಿಸಿದ್ದಳು.
ಆದರೆ ಇದ್ದಕ್ಕಿದ್ದ ಹಾಗೆ ಇಬ್ಬರ ಪ್ರೀತಿಯಲ್ಲಿ ಬಿರುಕು ಮೂಡಿದ್ದು, ಮನಸ್ತಾಪ ಉಂಟಾಗಿತ್ತು. ಇದರಿಂದ ನೊಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಆಕೆಯ ಪಾಲಕರು ನಾಗರಾಜು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಅವರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಕ್‌‌ಗೆ ಲಾರಿ ಡಿಕ್ಕಿ: ಹಿರಿಯ ಪತ್ರಕರ್ತ ಗಂಗಾಧರಮೂರ್ತಿ ವಿಧಿವಶ

‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + two =
Remember me
