ದೇವನಹಳ್ಳಿ:ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರ ಪತ್ನಿ ಪ್ರತಿಭಾ ಶರತ್ ಅವರ ಕಾರಿಗೆ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ. ಪ್ರಚಾರಕ್ಕೆಂದು ಬಂದಿದ್ದಾಗ ಪತ್ನಿಯ ಕಾರಿನ ಗ್ಲಾಸ್​ಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆ ಹೊಸಕೋಟೆಯ ಪಾರ್ವತಿಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡ್ತಾರೆ… ಬರೀ ಮೊಸರನ್ನ ತಿಂತಾರೆ; ಅನಿತಾ ಕುಮಾರಸ್ವಾಮಿ
ಕಿಡಿಗೇಡಿಗಳು ಇನ್ನೋವಾ ಕ್ರಿಸ್ಟಾ ಕಾರಿನ ಗ್ಲಾಸ್​ಗಳನ್ನು ಒಡೆದು ಹಾಕಿ ಅಟ್ಟಹಾಸ ಮರೆದಿದ್ದಾರೆ. ಪತಿ ಶರತ್ ಬಚ್ಚೇಗೌಡ ಪರವಾಗಿ ನಗರದಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ಪತ್ನಿ ಪ್ರತಿಭಾ ತೊಡಗಿಸಿಕೊಂಡಿದ್ದಾರೆ. ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಸೂಕ್ತ ಅಭ್ಯರ್ಥಿ ಸಿಗದೆ, ಹಾಲಿ ವಿಧಾನ ಪರಿಷತ್‌ ಸದಸ್ಯರಿಗೆ ಬಲವಂತ ಮಾಡಿ ಟಿಕೆಟ್‌ ನೀಡಲಾಗಿದೆ. ಹೊಸಕೋಟೆಯಲ್ಲಿ ಕಮಲ ಬಾಡಿ ಹೋಗಿದೆ ಎಂದು ಪ್ರಚಾರದ ವೇಳೆ ಶರತ್ ಬಚ್ಚೇಗೌಡ ವ್ಯಂಗ್ಯವಾಡಿದ್ದರು.
ಇದನ್ನೂ ಓದಿ:ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್ ಸಂತೋಷ್; ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
