ರಾಯಚೂರು:ಇದೀಗ ನಟಿ ಪೂಜಾ ರಮೇಶ್​, ರಾಜಕೀಯ ಜೀವನಕ್ಕೆ ಅಧಿಕೃತವಾಗಿ ಬಲಗಾಲಿಟ್ಟಿದ್ದಾರೆ. ಖ್ಯಾತ ನಟಿ, ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗುವುದರ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದಾರೆ.
ಪೂಜಾ ರಮೇಶ್​ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು ಬೆಂಗಳೂರಿನಲ್ಲಿ ಆಪ್ ಸೇರಿದಂತೆ ನಟಿಯೂ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಹಿಂದೆ ಪೂಜಾ ರಮೇಶ್​, ಸ್ಪರ್ಧೆ ಮಾಡುವುದರ ಬಗ್ಗೆ ದಿಗ್ವಿಜಯ ನ್ಯೂಸ್ ಬಳಿ ಎಕ್ಸ್​ಕ್ಲೂಸಿವ್ ಆಗಿ ಹಂಚಿಕೊಂಡಿದ್ದರು.

ಮಿಸ್ ಇಂಡಿಯಾ ವಿಜೇತೆ ಕೂಡ ಆಗಿರುವ ನಟಿ ಪೂಜಾ ರಮೇಶ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಮಲೆನಾಡು ಭಾಗದಿಂದ ಬಂದು ರಾಯಚೂರು ಜಿಲ್ಲೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಇವರು ಮಹಿಳಾ ಮತದಾರರನ್ನು ಟಾರ್ಗೆಟ್ ಮಾಡಿ ಮತ ಕೇಳಲು ಪ್ಲಾನ್ ಮಾಡಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ನ ಪ್ರಬಲ ಅಭ್ಯರ್ಥಿಗಳ ನಡುವೆ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಈ ಹಿಂದೆ 2013ರ ಚುನಾವಣೆಯಲ್ಲಿ ನಟಿ ಪೂಜಾ ಗಾಂಧಿ ಇದೇ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಪೂಜಾ ರಮೇಶ್ ಪ್ರಬಲ ಅಭ್ಯರ್ಥಿಗಳ ನಡುವೆ ಗೆದ್ದು ಬೀಗುತ್ತಾರಾ ಅನ್ನುವುದನ್ನು ಕಾದುನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + three =
Remember me
