ಮೈಸೂರು:ಭಾಭಾ ಪರಮಾಣು ಸಂಶೋಧನಾ ಸಂಸ್ಥೆ ವಿಜ್ಞಾನಿಯ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಮೈಸೂರಿನಲ್ಲಿ ನಾಪತ್ತೆಯಾಗಿದ್ದ ವಿಜ್ಞಾನಿ ಆಂಧ್ರದ ವಿಜಯವಾಡದಲ್ಲಿ ಪ್ರತ್ಯಕ್ಷವಾಗಿದ್ದಾರೆ.
ವಿಜಯವಾಡದ ಸಂಬಂಧಿಕರ ಮನೆಗೆ ಹೋಗಿರುವುದಾಗಿ ಭಾನುವಾರ ಸಂಜೆ ಸಂಶೋಧನಾ ಕೇಂದ್ರಕ್ಕೆ ಸ್ವತಃ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
24 ವರ್ಷದ ಯುವ ವಿಜ್ಞಾನಿ ಅಭಿಷೇಕ ರೆಡ್ಡಿ ಗುಲ್ಲಾ ಮೈಸೂರಿನ ಹೊರವಲಯದಲ್ಲಿರುವ ಭಾಭಾ ಪರಮಾಣು ಸಂಸ್ಥೆಯಲ್ಲಿ ಸಹಾಯಕ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಮೂಲತಃ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯವರು. ತಂದೆ ಮತ್ತು ತಾಯಿ ಇಬ್ಬರನ್ನು ಕಳೆದುಕೊಂಡು ಅಕ್ಷರಶಃ ಒಬ್ಬಂಟಿಯಾಗಿದ್ದರು.
ಇದನ್ನೂ ಓದಿ:ಶೋಭಾ ಕರಂದ್ಲಾಜೆಗೆ ಕುಸುಮಾ ತಿರುಗೇಟು
ಅಕ್ಟೋಬರ್ 6ರಂದು ಅಭಿಷೇಕ್ ರೆಡ್ಡಿ ಮನೆಯಿಂದ ಹೊರಹೋದವರು ಮತ್ತೆ ವಾಪಸ್ಸು ಬಂದಿರಲಿಲ್ಲ. ತಂದೆ-ತಾಯಿ ಕಳೆದುಕೊಂಡ ಮೇಲೆ ಮಾನಸಿಕ ಖಿನ್ನತೆ ಮತ್ತು ಮೈಗ್ರೇನ್​ನಿಂದ ಬಳಲುತ್ತಿದ್ದರು ಎನ್ನಲಾಗಿದೆ.
ನಾಪತ್ತೆ ಬಗ್ಗೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕರೆ ಮಾಡಿರುವ ಅವರು ಇನ್ನೆರಡು ದಿನಗಳ ನಂತರ ವಾಪಸ್ ಬರುವುದಾಗಿ ಮಾಹಿತಿ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಖ್ಯಾತ ಹಿರಿಯ ಸಂಗೀತ ನಿರ್ದೇಶಕ ರಾಜನ್​ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
