ಉಡುಪಿ:ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಪೆರ್ಡೂರು ಮೇಳದ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ(37) ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಉದಯ ಹೆಗಡೆ ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ, ಯಕ್ಷಗಾನ ಕಲಾವಿದೆ, ಶಿಕ್ಷಕಿಯಾಗಿರುವ ಕೊಂಡದಕುಳಿ ಅಶ್ವಿನಿ ಹೆಗಡೆ ಅವರು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಏ.21ರಂದು ಸಾಯಂಕಾಲ ಉದಯ ಅವರು ಕಾರಿನಲ್ಲಿ ಹೊರಗೆ ಹೋದವರು ವಾಪಸ್ ಬಂದಿಲ್ಲ. ಮೊಬೈಲ್ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿಲ್ಲ. ಶಿರಸಿಯಲ್ಲಿನ ಪತಿಯ ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ತಮ್ಮನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆರೈಕೆಗೆ ಉದಯ ಹೆಗಡೆ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಪೆರ್ಡೂರು ಮೇಳದ ಹೆಸರಾಂತ ಯಕ್ಷಗಾನ ಕಲಾವಿದ ನಾಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eight =
Remember me
