ಬೆಂಗಳೂರು:ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಲು ಉದ್ದೇಶಿತ ‘ಜನಸಂಕಲ್ಪ’ ಸಮಾವೇಶಕ್ಕೆ ಮೊದಲ ಸುತ್ತಿನಲ್ಲಿ ಜನರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ಇದರಿಂದಾಗಿ ಮಿಷನ್ 150 ಗುರಿ ಸಾಧಿಸುವ ವಿಶ್ವಾಸ ಇಮ್ಮಡಿಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೂರು ದಿನಗಳಲ್ಲಿ ಆರು ಜಿಲ್ಲೆ ಪ್ರವಾಸ ಮಾಡಿದ್ದು, ಪ್ರಾರಂಭದಲ್ಲೇ ಜನರಿಂದ ದೊರೆತ ಬೆಂಬಲವು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ. ಜನಸಂಕಲ್ಪ ಯಾತ್ರೆ ವಿಜಯಸಂಕಲ್ಪ ಯಾತ್ರೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ನಾಲ್ಕು ಕಿ.ಮೀ. ನಡೆಯಲಿ ಎಂದು ಸವಾಲು ಹಾಕುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದು, ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ದೇವರು ಒಳ್ಳೆಯ ಆರೋಗ್ಯ ನೀಡಲಿ, ನೂರು ವರ್ಷ ಚೆನ್ನಾಗಿರಲಿ ಎಂದರು.
ಅರ್ಥಹೀನ ಯಾತ್ರೆ:ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿರುವ ಭಾರತ್ ಜೋಡೋ ಯಾತ್ರೆಯೇ ಅರ್ಥಹೀನ. ದೇಶ ಒಕ್ಕೂಟವಾಗಿ ಒಗ್ಗಟ್ಟಾಗಿದ್ದು, ಅಭಿವೃದ್ಧಿಯಲ್ಲಿ ಮುನ್ನಡೆಯುತ್ತಿದೆ ಎಂದರು. ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದ್ದು, ಅಮೆರಿಕ ಸೇರಿ ಜಿ7 ದೇಶಗಳು ಆರ್ಥಿಕ ಕುಸಿತಕ್ಕೆ ಒಳಗಾಗಿವೆ. ಆದರೆ ಭಾರತ ಕನಿಷ್ಠ ಶೇ.7 ಅಭಿವೃದ್ಧಿಯನ್ನು ಕಾಯ್ದುಕೊಂಡಿದೆ ಎಂದು ಹೇಳಿದರು. ರಾಹುಲ್ ಗಾಂಧಿಯವರ ಮೊದಲ ಮಿಸೈಲ್ ವಿಫಲವಾಗಿದೆ. ಈಗ ಮತ್ತೊಮ್ಮೆ ಲಾಂಚ್ ಮಾಡುವ ಪ್ರಯತ್ನ ಬಿಟ್ಟರೆ ಜೋಡೋ ಯಾತ್ರೆಗೆ ಅರ್ಥವಿಲ್ಲ ಎಂದು ಬೊಮ್ಮಾಯಿ ಕುಟುಕಿದರು.
ಶೂನ್ಯ ಸಾಧನೆ:ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋನಿಯಾಗಾಂಧಿ ಗೆದ್ದರೆ ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವೆ ಎಂದಿದ್ದರು. ನಂತರ ರಾಯಬರೇಲಿ ಕ್ಷೇತ್ರ ಆಯ್ಕೆ ಮಾಡಿಕೊಂಡು ಬಳ್ಳಾರಿ ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಆಯ್ಕೆ ಮಾಡಿದ ಜನರಿಗೆ ಕೃತಜ್ಞತೆಯನ್ನೂ ಸಲ್ಲಿಸಲಿಲ್ಲ ಎಂದು ಬೊಮ್ಮಾಯಿ ಕೇಳಿದರು.
ಮುರುಘಾಮಠ ವಿಚಾರದಲ್ಲಿ ಕಾನೂನುರೀತ್ಯ ಕ್ರಮ:ಚಿತ್ರದುರ್ಗ ಮುರುಘಾ ಮಠಕ್ಕೆ ಹೊಸ ಶ್ರೀಗಳ ನೇಮಕಕ್ಕೆ ಸಂಬಂಧಿಸಿದಂತೆ ಕಾನೂನುರೀತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಭಕ್ತಮಂಡಳಿಯ ಸರ್ವರೂ ಭೇಟಿಯಾಗಿ ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆ ಬಗ್ಗೆ ವಿವರಿಸಿ, ಹೊಸ ಶ್ರೀಗಳ ನೇಮಕ ವಿಚಾರ ಪ್ರಸ್ತಾಪಿಸಿದ್ದಾರೆ. ಶ್ರೀಮಠದಲ್ಲಿ ಕಾನೂನು ಪ್ರಕಾರ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ನಿಯೋಗ ಸಲ್ಲಿಸಿದ ಅಹವಾಲು ಪರಿಗಣಿಸಿ ಕಾನೂನು ಚೌಕಟ್ಟಿನೊಳಗೆ ಕ್ರಮವಹಿಸಲಾಗುವುದು ಎಂದರು.
2 ವರ್ಷಗಳಿಂದ ಬೇರೆ ಇದ್ದ ದಂಪತಿ, 2 ದಿನಗಳ ಹಿಂದೆ ಮತ್ತೆ ಬಂದ ಪತಿ: ಪತ್ನಿಗೆ ಚುಚ್ಚಿ ಚುಚ್ಚಿ ಹಲ್ಲೆ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + twelve =
Remember me
