ಯಾದಗಿರಿ:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆಂದು ತೆರಳಿದ್ದ ಬೆಂಗಳೂರಿನ ಕೆ.ಆರ್. ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರ ಫಾರ್ಚೂನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ:ಪಂಜಾಬ್​: 48 ಕೆ.ಜಿ ಮಾದಕ ವಸ್ತು ವಶ, ಮೂವರ ಬಂಧನ
ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಅಪಘಾಕ್ಕೊಳಗಾದ ಘಟನೆ ಸೋಮವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಗನ್ ಮ್ಯಾನ್​ ಅದೃಷ್ಟವಶಾತ್​ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಆಗಮಿಸಿದ ವೇಳೆ ಘಟ‌ನೆ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಶಾಸಕ ಬೈರತಿ ಬಸವರಾಜು ಅವರು ಬೇರೆ ಕಾರಿನಲ್ಲಿ ತೆರಳಿದ್ದರಿಂದ ಅವರಿಗೆ ಯಾವುದೇ ಪ್ರಾಣಾಪಾಯ ಅಥವಾ ಗಾಯವಾಗಲೀ ಸಂಭವಿಸಿಲ್ಲ.ಇನ್ನು ಘಟನೆ ನಡೆದ ಸ್ಥಳಕ್ಕೆ ಹುಣಸಗಿ ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆತ್ತಿಸಿ, ತೆಗೆದುಕೊಂಡು ಹೋಗಿದ್ದಾರೆ.
ಚುನಾವಣೆಯಿಂದ 6 ವರ್ಷ ನರೇಂದ್ರ ಮೋದಿ ಅನರ್ಹತೆ: ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 3 =
Remember me
