ಬೆಂಗಳೂರು:ವಿಧಾನಸಭೆಯ ಮೂರು ಕ್ಷೇತ್ರಗಳ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಕೊಡುತ್ತೇವೆ ಎಂದು ಶಾಸಕ ತನ್ವೀರ್ ಶೇಠ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾರಿಗೆ ಕೊಡುವಂತಹ ಸ್ಥಾನ ಕಡಿಮೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಗಳು ಇರುತ್ತಾರೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಜನ ಈಗಾಗಲೇ ಗೆದ್ದಿದ್ದಾರೆ.ಮುಂಬರುವ ಉಪ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಮೊದಲ ಆದ್ಯತೆ ಕೊಡುತ್ತೇವೆ ಎಂದು ತಿಳಿಸಿದರು.
ಚನ್ನಪಟ್ಟಣ ಒಂದೇ ಅಲ್ಲ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಆಯ್ಕೆಗೆ ಕಾರ್ಯಕ್ರಮ ರೂಪಿಸಿದ್ದೇವೆ. ಎಲ್ಲ ಸ್ಥಾನ ತುಂಬಲು ನಾವು ಮುಂದಾಗಿದ್ದೇವೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬುದು ಆನಂತರದಲ್ಲಿ ಚರ್ಚೆಯಾಗಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕೋರಿಕೆಗೆ ವರಿಷ್ಠರು ಯಾವ ರೀತಿ ಪರಿಗಣಿಸುತ್ತಾರೆ ಎನ್ನುವುದನ್ನು ನೋಡಬೇಕು. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಗಳಿಗೆ ಕೊರತೆ ಇಲ್ಲ. ಗೆಲುವಿನ ತಂತ್ರಗಾರಿಕೆ ಮಾಡಬೇಕು. ಯಾವ ರೀತಿ ಕಾರ್ಯತಂತ್ರ ಮಾಡಬೇಕು ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿಗ್ಗಾಂವಿಯಲ್ಲಿ ಲಿಂಗಾಯತ ಅಭ್ಯರ್ಥಿ ಆಯ್ಕೆ ವಿಚಾರ ಕುರಿತ ಪ್ರಶ್ನೆಗೆ, ಇನ್ನೂ ಯಾವ ನಿರ್ಧಾರ ಆಗಿಲ್ಲ. ಎಲ್ಲ ಸಮುದಾಯಗಳು ಟಿಕೆಟ್ ಕೇಳುತ್ತಿವೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ಗೆ ಅಧಿಕ ಮತ ಬಂದಿವೆ. ಹಾಗಾಗಿ ಎಲ್ಲರೂ ಬೇಡಿಕೆ ಇಡುತ್ತಿದ್ದಾರೆ. ಗೆದ್ದವರು, ಸೋತವರು, ಕಾರ್ಯಕರ್ತರಿಗೆ ಮೊದಲ ಆದ್ಯತೆ ಕೊಡುತ್ತೇವೆ. ಎಲ್ಲ ಸಮುದಾಯಗಳು ಬೇಡಿಕೆ ಇಟ್ಟಿವೆ ಎಂದು ಹೇಳಿದರು.
ಎಂಎಲ್ ಸಿ ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಏನೇನು ಆಗುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. ಪ್ರಜ್ವಲ್, ದರ್ಶನ್,ಈಗ ಸೂರಜ್ ವಿಚಾರ ಬಂದಿದೆ. ನಾವು ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಇಡಬೇಕು. ಸಂತ್ರಸ್ತರಿಗೆ ಸರ್ಕಾರ ಸಹಾಯ ಮಾಡಬೇಕು. ಈ ವ್ಯವಸ್ಥೆಯಲ್ಲಿ ಕೆಟ್ಟದನ್ನು ಹೋಗಲಾಡಿಸಬೇಕು. ಅದಕ್ಕೆ ಏನ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ ಎಂದು ತನ್ವೀರ್ ಸೇಠ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − ten =
Remember me
