ಕೊಪ್ಪಳ:ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ ಎನ್ನಲಾಗಿರುವ ಪ್ರಕರಣದ ಕುರಿತಂತೆ ಸಂಬಂಧಿತ ಶಾಸಕರು ಇದೀಗ ಪ್ರತಿಕ್ರಿಯೆ ನೀಡಿದ್ದು, ಸಾವಿಗೆ ಏನು ಕಾರಣ ಎಂಬು ಅಂಶವನ್ನು ಬಹಿರಂಗಪಡಿಸಿದ್ದಾರೆ. ಕನಕಗಿರಿಯ ಶಾಸಕ ಬಸವರಾಜ ದಡೇಸುಗೂರು ಅವರು ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.
ಇಂದು ಗಂಗಾವತಿಯಲ್ಲಿ ಈ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, ವೃದ್ಧೆಯ ಸಾವಿಗೆ ತಮ್ಮ ಕಾರು ಕಾರಣವಲ್ಲ ಎಂದೂ ಹೇಳಿದ್ದಾರೆ. ನನ್ನ ಕಾರು ಆಕೆಗೆ ಡಿಕ್ಕಿಯಾಗಿಲ್ಲ, ನಾಯಿಯೊಂದು ಆಕೆಯ ಮೇಲೆ ಹಾರಿದೆ, ನಾಯಿ ಹಾರಿದ ಪರಿಣಾಮ ಆಕೆ ಕೆಳಗೆ ಬಿದ್ದು ಗಾಯವಾಗಿತ್ತು, ನಾನು ಕಾರಿನಿಂದ ಇಳಿದು ಅಜ್ಜಿಯನ್ನು ಕಾರಟಗಿ ಆಸ್ಪತ್ರೆಗೆ ಕಳುಹಿಸಿದೆ ಎಂಬುದಾಗಿ ಅವರು ಹೇಳಿದ್ದಾರೆ. ಮಾನವೀಯತೆ ದೃಷ್ಟಿಯಿಂದ ನಾನು ಸಹಾಯ ಮಾಡಿದ್ದೇ ತಪ್ಪಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ನಾನು ಮೃತ ವೃದ್ಧೆ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡುವೆ ಎಂದೂ ಭರವಸೆ ನೀಡಿದ್ದಾರೆ.
ಕಾರಟಗಿಯ ಮೈಲಾಪುರ ಬಸ್ ನಿಲ್ದಾಣದ ಬಳಿ ನಡೆದಿದ್ದ ಈ ಅಪಘಾತದಲ್ಲಿ ಮೈಲಾಪುರ ಗ್ರಾಮದ ನಿವಾಸಿ ಮರಿಯಮ್ಮ ಗಾಯಗೊಂಡಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 2 =
Remember me
