ಮಂಡ್ಯ:ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್​ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.
ದರ್ಶನ್​ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ನಿನ್ನೆ ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರ ಆಹ್ವಾನ‌ದ ಮೇರೆಗೆ ದರ್ಶನ್​, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾರೆ.
ಇದನ್ನೂ ಓದಿ:ವಿಜಯಾನಂದ ಟ್ರಾವೆಲ್ಸ್​ಗೆ ಟಾಟಾ ಬಸ್ ಹಸ್ತಾಂತರ: ಶಿವಾ ಸಂಕೇಶ್ವರ ಅವರಿಗೆ ಕೀ ನೀಡಿದ ಕೆ.ಗುರುಪ್ರಸಾದ್
ಅಂದಹಾಗೆ ದರ್ಶನ್​ ಪುಟ್ಟಣ್ಣಯ್ಯ ಅವರು ಪುಟ್ಟರಾಜು ವಿರುದ್ಧ ಜಯ ದಾಖಲಿಸಿದರು. ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್​ ಸ್ಪರ್ಧಿಸಿದರು. ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್​ ಬೆಂಬಲ ನೀಡಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್​ ಪುಟ್ಟಣ್ಣಯ್ಯ ಮೇಲೆ ಜನರ ನಿರೀಕ್ಷೆ ತುಂಬಾ ಇದೆ.(ದಿಗ್ವಿಜಯ ನ್ಯೂಸ್​)
ನಿಸರ್ಗದೊಂದಿಗೆ ಮಧುರ ಸಾಂಗತ್ಯ: ಇಂದು ವಿಶ್ವ ಜೇನುನೊಣ ದಿನ

ನಗರ ದಟ್ಟಣೆ ನಿವಾರಣೆ: ಎಂಟು ಹೊಸ ನಗರಗಳ ಸೃಷ್ಟಿಗೆ ಕೇಂದ್ರ ಚಿಂತನೆ

ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಹೊತ್ತಿಕೊಂಡ ಬೆಂಕಿ: ಪುತ್ರಿ ಸಾವು, ತಾಯಿ ಪರಿಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + thirteen =
Remember me
