
ಬೆಂಗಳೂರು:ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ವಿಧಾನಸಭೆ ಉಪ ಚುನಾವಣೆಗಳ ಕಡೆಗೆ ಕಾಂಗ್ರೆಸ್ ಗಮನಹರಿಸಿದೆ.ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ವತ್ತು ತುಕರಾಂ ಅವರುಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರುಗಳು ಪ್ರತಿನಿಧಿಸುತ್ತಿದ್ದ ಶಿಗ್ಗಾಂವ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಉಪ ಚುನಾವಣೆ ಅನಿವಾರ್ಯವಾಗಿದೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲುಂಡಿರುವ ಡಿ.ಕೆ.ಸುರೇಶ್ ಅವರನ್ನು ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಒತ್ತಡ ಹೆಚ್ಚುತ್ತಿದೆ.ಚುನಾವಣೆಯಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಪರ್ಧೆ ಮಾಡುವುದಕ್ಕೆ ಸ್ವತಂ ಡಿ.ಕೆ.ಸುರೇಶ್ ನಿರಾಕರಿಸಿದ್ದಾರೆ. ಆದರೆ, ಈ ನಿಟ್ಟಿನಲ್ಲಿ ಡಿಕೆಶಿ ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಲಿದೆ. ಇನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಸಿ.ಪಿ.ಯೋಗೇಶ್ವರ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಚರ್ಚೆ ನಡೆಯುತ್ತಿದೆ. ಇದು ಜೆಡಿಎಸ್ ಕ್ಷೇತ್ರವಾಗಿರುವುದರಿಂದ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯೂ ಇದೆ.ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ತುಕರಾಂ ಕುಟುಂಬಕ್ಕೆ ಟಿಕೆಟ್ ನೀಡಲು ಚರ್ಚೆ ನಡೆದಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಚರ್ಚೆ ಹಂತದಲ್ಲಿದೆ.ಮತ್ತೊಂದೆಡೆ ಶಿಗ್ಗಾಂವ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಬಿಜೆಪಿ ಟಿಕೆಟ್‌ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನಿಂದ ಈ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆ? ಬೇಡವೇ? ಎನ್ನುವುದು ಚರ್ಚೆಯಲ್ಲಿದೆ.ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಾಜಕೀಯವಾಗಿ ಎಲ್ಲರ ಗಮನ ಸೆಳೆಯುತ್ತಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:18 − 4 =
Remember me
