ಬೆಂಗಳೂರು:ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್​.ಎ. ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ ಪ್ರಸಂಗವೊಂದು ನಡೆದ. ರಾಜಕೀಯ ಭಾಷಣ ವೇಳೆ ಹ್ಯಾರಿಸ್ ಈ ಎಡವಟ್ಟು ಮಾಡಿಕೊಂಡಿದ್ದು, ವಿವಾದವಾಗಿ ಪರಿಣಮಿಸುವ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.
ಇದನ್ನೂ ಓದಿ:ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ
ಸಾರ್ವಜನಿಕರನ್ನು ಉದ್ದೇಶಿಸಿ ರಾಜಕೀಯವಾಗಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು’ ಎಂಬುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ತಾಯಿ ಮೇಲಿನ ಕೋಪಕ್ಕೆ ಮಗನನ್ನು ಕೆರೆಗೆ ತಳ್ಳಿ ಸಾಯಿಸಿದ ಪಾಪಿ!; ಇದು 2 ಸಂಸಾರದ ದುರಂತ ಕಥೆ
ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ನಾಳೆ ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿದ್ದು, ಇದರ ಸುಳಿವು ಸಿಗುತ್ತಿದ್ದಂತೆ ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ ಎಂದಿರುವ ಹ್ಯಾರಿಸ್ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಹ್ಯಾರಿಸ್​ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ಹಿಂಪಡೆಯಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − six =
Remember me
