ದಾವಣಗೆರೆ:ವ್ಯಕ್ತಿಯೊಬ್ಬ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಹೋರಾಟದಲ್ಲಿದ್ದಾಗ ಶಾಸಕರೊಬ್ಬರು ತಾವು ಸಂಚರಿಸುತ್ತಿದ್ದ ವಾಹನದಲ್ಲಿ ಆತನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸುವಲ್ಲಿ ನೆರವಾಗಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರದ ದೀಟೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್​. ರಾಮಪ್ಪ ಇದಕ್ಕೆ ಸಾಕ್ಷಿಯಾಗಿದ್ದಾರೆ. ದೀಟೂರು ಗ್ರಾಮದ ಬಸವರಾಜ್ (30) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು ಆಂಬುಲೆನ್ಸ್​ಗಾಗಿ ಕಾಯುತ್ತಿದ್ದರು.
ಈ ಸಂದರ್ಭದಲ್ಲಿ ಕೊಂಡಜ್ಜಿ ಗ್ರಾಮದಲ್ಲಿ ಬಾಗಿನ ಅರ್ಪಿಸಿ ಅದೇ ದಾರಿಯಾಗಿ ಸಾಗುತ್ತಿದ್ದ ಶಾಸಕ ಎಸ್​.ರಾಮಪ್ಪ, ಇದನ್ನು ಗಮನಿಸಿ ನೆರವಾಗಿದ್ದಾರೆ. ತಾವು ಸಂಚರಿಸುತ್ತಿದ್ದ ವಾಹನದಲ್ಲೇ ಆ ವ್ಯಕ್ತಿಯನ್ನು ಕರೆದೊಯ್ದು ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವ ಮೂಲಕ ಸ್ಥಳೀಯರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.
ರೋಗಿ ಎಚ್ಚರವಿರುವಾಗಲೇ ನಡೆಯಿತು ಮಿದುಳಿನ ಶಸ್ತ್ರಚಿಕಿತ್ಸೆ; ಸರ್ಜರಿ ನಡೆಯುವಾಗ ಗಾಯತ್ರಿ ಮಂತ್ರ ಪಠನೆ

ಅಮಾವಾಸ್ಯೆ ಎಂದರೆ ಸಾಕು ಈ ಮನೆಯವರಿಗೇನೋ ದುಗುಡ; ಮಾಟ-ಮಂತ್ರ ಮಾಡಿಸುತ್ತಿರುವುದ್ಯಾರು ಎಂಬುದಿನ್ನೂ ನಿಗೂಢ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
