ತುಮಕೂರು:ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಕೊನೆಗೂ ಬಂಧಿಸಲ್ಪಿಟ್ಟಿದ್ದಾರೆ. ಬಂಧನದ ಭೀತಿಯಿಂದ ಕಾರಿನಲ್ಲಿ ಬೇರೆಡೆಗೆ ತೆರಳುತ್ತಿದ್ದ ಅವರನ್ನು ಮಾರ್ಗಮಧ್ಯೆ ಅಡ್ಡಗಟ್ಟಿ ಅರೆಸ್ಟ್​ ಮಾಡಲಾಗಿದೆ.
ತುಮಕೂರಿನ ಕ್ಯಾತಸಂದ್ರ ಟೋಲ್ ಗೇಟ್​ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿದ್ದು, ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಶಾಸಕ ಮಾಡಾಳ್ ಚಿತ್ರದುರ್ಗದಿಂದ ಬೆಂಗಳೂರಿನತ್ತ ಕೆಎ 17 ಝಡ್ 7929 ನಂಬರಿನ ಬಿಳಿ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ!
ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಮಾಡಾಳ್ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಮಾಡಾಳ್, ಅದನ್ನು ಅರ್ಧಕ್ಕೇ ಮೊಟಕುಗೊಳಿಸಿ ನಾಪತ್ತೆಯಾಗಿದ್ದರು. ಕೊನೆಗೂ ಲೋಕಾಯುಕ್ತ ಪೊಲೀಸರು ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 1 =
Remember me
