ಚಾಮರಾಜನಗರ:ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾವಚಿತ್ರಕ್ಕೆ ಸೆಗಣಿ ಬಳಿದು ಚಪ್ಪಲಿಯಿಂದ ಹೊಡೆದ ಪ್ರಕರಣ ನಡೆದಿದ್ದು, ಈ ದುಷ್ಕೃತ್ಯ ಎಸಗಿದವರನ್ನು ತಲೆ ಕೆಟ್ಟವರು ಎಂದಿರುವ ಶಾಸಕ, ಅಂಥವರ ವಿರುದ್ಧ ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ. ಯಳಂದೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಈ ವಿಷಯ ತಿಳಿಸಿದರು.
ಇದನ್ನೂ ಓದಿ:ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ
ಶೇ. 40 ಭ್ರಷ್ಟಾಚಾರ ಎಂದು ಕಾಂಗ್ರೆಸ್​​ನವರು ಮಾಡುತ್ತಿರುವುದು ಆಧಾರರಹಿತ ಆರೋಪ. ಅವರು ಲೋಕಾಯುಕ್ತ, ನ್ಯಾಯಾಲಯಕ್ಕೆ ದೂರು ನೀಡಿದ್ದಾರಾ? ತಲೆ ಕೆಟ್ಟಿರುವವರು ಈ ರೀತಿ ಮಾಡುತ್ತಾರೆ. ತಲೆ ಸರಿ ಇರುವವರು ಇದಕ್ಕೆ ತಲೆ ಕೆಡಿಸಿಕೊಳ್ಳಲ್ಲ. ಈ ಬಗ್ಗೆ ನಾನು ದೂರು ನೀಡಲ್ಲ. ತಲೆ ಕೆಟ್ಟಿರುವವರ ಮೇಲೆ ದೂರು ನೀಡಲಾಗುವುದಿಲ್ಲ. ಈ ರೀತಿ ಮಾಡಿರುವವರೇ ತಾಕತ್ ಇದ್ರೆ ದೂರು ನೀಡಲಿ ಎಂದು ಮಹೇಶ್ ಸವಾಲೆಸೆದಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಶಾಸಕ ಎನ್.ಮಹೇಶ್ 40% ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರು ನೀಡಲಿ. ಆದರೆ ಬೀದಿಬದಿಯಲ್ಲಿ ಈ ರೀತಿ ಬರೆದು ನನ್ನನ್ನು ಹೆದರಿಸುವುದು ಸಾಧ್ಯವಿಲ್ಲ, ಅದನ್ನು ಬರೆದಿರುವವರು ವಿಕೃತ ಮನಸ್ಸಿನವರು. ಹದ್ದು ಮೀರಿದರೆ ಕಾನೂನು ಪ್ರಕಾರ ಕೆಲಸ ಮಾಡಬೇಕಾಗುತ್ತದೆ‌ ಎಂದಿರುವ ಮಹೇಶ್, ಈ ಪ್ರಕರಣದಿಂದ ನನ್ನ ವರ್ಚಸ್ಸಿಗೆ ಯಾವುದೇ ಹಾನಿಯಾಗಲ್ಲ ಎಂದಿದ್ದಾರೆ.
ಮುಳ್ಳುಹಂದಿಯ ಆಸೆಗೆ ಪ್ರಾಣವನ್ನೇ ಕಳೆದುಕೊಂಡ್ರು; ಗುಹೆಯೊಳಗೆ ಉಸಿರುಗಟ್ಟಿ ಇಬ್ಬರ ಸಾವು

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಗೆ ಸದ್ಯಕ್ಕಿಲ್ಲ ಟೋಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
