ಕಡಬ:ಇಂದು ಬೆಳಗ್ಗೆ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಸುಳ್ಯ ಶಾಸಕ ಎಸ್​.ಅಂಗಾರ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೊನಾ ಮುನ್ನೆಚ್ಚರಿಕಾ ಕ್ರಮದ ಹಿನ್ನೆಲೆಯಲ್ಲಿ ಕಡಬ ಅನುಗ್ರಹ ಸಭಾಭವನದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ್ದ ಶಾಸಕರು, ಬಳಿಕ ಕಡಬ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಪಡಿತರ ವಿತರಣಾ ವ್ಯವಸ್ಥೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿದ್ದ ವೇಳೆ ದಿಢೀರ್​ ಅಸ್ವಸ್ಥಗೊಂಡರು.
ವೈದ್ಯರನ್ನು ಸ್ಥಳಕ್ಕೆ ಕರೆಸಿ ಪರೀಕ್ಷೆ ಮಾಡಿಸಲಾಯಿತು. ಸಮೀಪದ ಜನೌಷಧಿ ಕೇಂದ್ರದಲ್ಲಿ ಇಸಿಜಿ ತಪಾಸಣೆಯನ್ನೂ ಮಾಡಲಾಯಿತು. ಶಾಸಕರಿಗೆ ರಕ್ತದ ಒತ್ತಡ ತೀವ್ರವಾಗಿ ಕಡಿಯಾಗಿರುವ ಕಾರಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರೊನಾ ಲಸಿಕೆ ಅಭಿವೃದ್ಧಿಗೆ ಹರಸಾಹಸ: ಅಮೆರಿಕ, ಚೀನಾ, ಜರ್ಮನಿ ಸಹಿತ ಹಲವು ರಾಷ್ಟ್ರಗಳಿಂದ ಶ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 10 =
Remember me
